Main News

ಅವೈಜ್ಞಾನಿಕ ಕೃಷಿಭೂಮಿ ಸ್ವಾಧೀನಕ್ಕೆ ಚೆಲುವರಾಯಸ್ವಾಮಿ ವಿರೋಧ

ನ್ಯೂಸ್ ಸ್ನ್ಯಾಪ್.
ಚಿತ್ರದುರ್ಗ.

ಬೆಳ್ಳೂರು ಕ್ರಾಸ್‍ನಿಂದ ಯಡಿಯೂರು ಮಾರ್ಗ ಮಧ್ಯದಲ್ಲಿರುವ ಸುಮಾರು 500 ಎಕರೆ ಪ್ರದೇಶವನ್ನು ಕರ್ನಾಟಕ ಹೌಸಿಂಗ್ ಬೋರ್ಡ್ ವಶಮಾಡಿಕೊಂಡಿದೆ. ಇದರಲ್ಲಿ ಬಹುಪಾಲು ಕೃಷಿ ಭೂಮಿ ಇದೆ. ಇಂತಹ ಅವೈಜ್ಞಾನಿಕ ಸ್ವಾಧೀನ ಪ್ರಕ್ರಿಯೆಗೆ ತಮ್ಮ ವಿರೋಧವಿದೆ ಎಂದು ಮಾಜಿ ಸಚಿವ ಚಲುವರಾಯ ಸ್ವಾಮಿ ಬುಧವಾರ ಹೇಳಿದರು.

ನಗರದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಎನ್. ಚೆಲುವರಾಯ ಸ್ವಾಮಿ, ಈಗಾಗಲೇ ಹೌಸಿಂಗ್ ಬೋರ್ಡ್ ನವರು ಲೇಔಟ್ ರಚನೆಗೆ ಟೆಂಡೆರ್ ಕರೆದು, ಎಲ್ಲಾ ಕಾರ್ಯಗಳು ಪೂರ್ಣವಾಗಿವೆ” ಎಂದರು.

“ಅಲ್ಲದೇ ಕೆಲವು ವರ್ಷಗಳ ಹಿಂದೆ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಡಿಬಿ) ಯವರು ಪ್ರೇಮ್ ಶುಗರ್ ಎಂಬ ಕಂಪನಿಯ ಮನವಿಯಂತೆ 500 ಎಕರೆ ಜಾಗವನ್ನು ಕಾರ್ಖಾನೆ ನಿರ್ಮಿಸಲು ಇದೇ ಪ್ರದೇಶದಲ್ಲಿ ನೀಡಲಾಗಿದೆ. ಆದರೆ ಅನೇಕ ವರ್ಷಗಳು ಕಳೆದರೂ ಕಾರ್ಖಾನೆಯ ಯಾವ ಕಾಮಗಾರಿಗಳೂ ಪ್ರಾರಂಭವಾಗಿಲ್ಲ ಎಂದರು.

ಈಗ ಕರ್ನಾಟಕ ಅಭಿವೃದ್ಧಿ ಮಂಡಳಿಯು ಒಟ್ಟು 1200 ಎಕರೆ ಭೂಮಿಯನ್ನು ಸ್ವಾಧೀನ ಮಾಡಲು ಪ್ರಯತ್ನಸುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಈ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಿಂದ ಅಲ್ಲಿ ಕೃಷಿ ಭೂಮಿಯನ್ನು ಹೊಂದಿದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹಾಗಾಗಿ ಇದೊಂದು ಅವೈಜ್ಞಾನಿಕ ಸ್ವಾಧೀನ ಕ್ರಮವಾಗಿದೆ ಎಂದು ತಿಳಿಸಿದರು.

ನಾನು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಯೋಜನೆಯನ್ನು ತಡೆಹಿಡಿಯುವಂತೆ ಅಥವಾ ಜನಸಾಮಾನ್ಯರು ಹಾಗೂ ರೈತರಿಗೆ ತೊಂದರೆಯಾಗದಂತಹ ಪ್ರದೇಶದಲ್ಲಿ ಯೋಜನೆಯನ್ನು ಜಾರಿ ಮಾಡುವಂತೆ ಮನವಿ ಮಾಡಿದ್ದೇನೆ. ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರ ಗಮನಕ್ಕೂ ಈ ವಿಚಾರವನ್ನು ತರುತ್ತೇನೆ” ಎಂದರು.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024