ಮಂಡ್ಯ : ಸಚಿವ ಎನ್ ಚಲುವರಾಯಸ್ವಾಮಿ ಮಾಟ, ಮಂತ್ರ ಮಾಡಿಸುತ್ತಾನೆ. ಸತ್ಯವನ್ನು ಸುಳ್ಳು ಸುಳ್ಳು ಎಂದು ಹತ್ತು ಬಾರಿ ಹೇಳಿ ಸುಳ್ಳು ಮಾಡುತ್ತಾನೆ. ಸಚಿವ ಚಲುವರಾಯಸ್ವಾಮಿ ಅದೃಷ್ಟ ಚೆನ್ನಾಗಿದೆ. ಚಲುವರಾಯಸ್ವಾಮಿ ಗೆದ್ದಾಗೆಲ್ಲ ದುಡ್ಡು ಮಾಡುತ್ತಾನೆ. ನಾವು ಗೆದ್ದಾಗ ವಿರೋಧ ಪಕ್ಷದಲ್ಲಿ ಕೂತು ಬಾಯಿ ಬಡಿದುಕೊಳ್ಳುತ್ತೇವೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಆರೋಪಿಸಿದರು.
ನಾಗಮಂಗಲದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಚಲುವರಾಯಸ್ವಾಮಿ ಕಳೆದ 7-8 ತಿಂಗಳಿಂದ ಮಾತನಾಡುತ್ತಿಲ್ಲ. ಚಲುವರಾಯಸ್ವಾಮಿ ಪರ ಕ್ಯಾಂಪೇನ್‌ಗೂ ಬರಲಿಲ್ಲ. ಮುನಿಸಿಗೆ ಕಾರಣ ಏನೆಂದು ಚಲುವರಾಯಸ್ವಾಮಿ ಉತ್ತರ ಕೊಡ್ತಾರಾ? ಕುಮಾರಸ್ವಾಮಿ ಫಾರೀನ್‌ಗೆ ಹೋಗುವ ಬಗ್ಗೆ ಮಾತನಾಡುತ್ತಾನೆ.
ಕುಮಾರಣ್ಣ ಯಾವುದಾದರೂ ಕ್ಯಾಸಿನೋಗೆ ಇಸ್ಪಿಟ್ ಆಡೋಕೆ ಹೋಗಿದ್ರಾ? ಆದರೆ ಚಲುವರಾಯಸ್ವಾಮಿ ಆ ಕೆಲಸ ಮಾಡುತ್ತಾನೆ. ಎಲ್ಲೆಲ್ಲಿ ಜಮೀರ್ ಹೆಸರು ದುರ್ಬಳಕೆ ಆಗಿತ್ತು, ಏನೇನಾಗಿತ್ತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು.15% ಆರೋಪ ಮಾಡಿ ಯೂಟರ್ನ್ ಹೊಡೆದ ಗುತ್ತಿಗೆದಾರರು : ಹೆಚ್‍ಡಿಕೆ ಆರೋಪ
ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೇ ನಾವು ಸುಮ್ಮನಿರಲ್ಲ. ಪುಟ್ಟೇಗೌಡರಿಗೆ ಈತ ಬೀಡಿ, ಸಿಗರೇಟ್ ತಂದು ಕೊಡುತ್ತಿದ್ದು ಸುಳ್ಳಾ? ಶಿವರಾಮೇಗೌಡ ಬಳಿ ಐದು ಸಾವಿರ ರೂ. ಹಣಕ್ಕೆ ಬಂದಿದ್ದು ಸುಳ್ಳಾ? ಚಲುವರಾಯಸ್ವಾಮಿಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಮಾಡಿದ್ದು ಜೆಡಿಎಸ್. ಶಾಸಕ, ಸಚಿವ, ಎಂಪಿಯನ್ನಾಗಿ ಮಾಡಿದ್ದು ಜೆಡಿಎಸ್ ಪಕ್ಷ. ಚಲುವರಾಯಸ್ವಾಮಿಗೆ ನಿಯತ್ತು ಇಲ್ಲ. ಹಿಟ್ಟಿಕ್ಕಿದವಳನ್ನೇ ಇಟ್ಟು ಕೊಳ್ಳುವವರನ್ನು ಏನು ಅಂತ ಕರಿಯೋದು? ಎಂದು ವಾಗ್ದಾಳಿ ಮಾಡಿದರು.