ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಸೋತರೆ ಮುಂದೆ ಕ್ಯಾಬಿನೆಟ್‌ನಲ್ಲಿ ಮಾತಾಡಲು ಆಗದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಇರಬೇಕಾಗುತ್ತೆ ಎಂದು ಸಚಿವ ಚಲುವರಾಯಸ್ವಾಮಿ ಬಹಿರಂಗವಾಗಿ ಹೇಳಿದ್ದರು.
ಇದೀಗ ಜೆಡಿಎಸ್ ಕಾರ್ಯಕರ್ತರು ಆ ಹೇಳಿಕೆಯನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ.
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಯನ್ನು ಸೋಲಿಸಲೇಬೇಕೆಂದು ಸಚಿವ ಚಲುವರಾಯಸ್ವಾಮಿ ಹಾದಿಯಾಗಿ ಮಂಡ್ಯ ಜಿಲ್ಲೆಯ ಕೈ ನಾಯಕರು ಹಾಗೂ ಮುಖಂಡರು ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದೀಗ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಯಾರೂ ಊಹೆ ಮಾಡದ ರೀತಿಯಲ್ಲಿ 2,84,620 ಮತಗಳ ಲೀಡ್ ತೆಗೆದುಕೊಂಡು ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.
ಈ ಮೂಲಕ ಕುಮಾರಸ್ವಾಮಿ ವಿರುದ್ಧ ಕೈ ನಾಯಕರಿಗೆ ತೀವ್ರ ಮುಖ ಭಂಗವಾಗಿದೆ.
ಚಲುವರಾಯಸ್ವಾಮಿಯವರು ನಾಗಮಂಗಲದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಒಂದು ವೇಳೆ ಸ್ಟಾರ್ ಚಂದ್ರು ಸೋತರೆ ನನಗೆ ಕೆಲಸ ಮಾಡಲು ಮನಸ್ಸು ಬರಲ್ಲ. ನಾನು ಕ್ಯಾಬಿನೇಟ್‌ನಲ್ಲಿ ಟೇಬಲ್ ಕುಟ್ಟಿ ಮಾತಾಡೋಕೆ ಆಗಲ್ಲ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕಾಗುತ್ತದೆ ಎಂದರು .
ಸ್ಟಾರ್ ಚಂದ್ರು ಸೋತರೆ ನಾನು ಯಾರ ಕೈಗೂ ಸಿಗಲ್ಲ ಎರಡು ತಿಂಗಳು ಪ್ರವಾಸಕ್ಕೆ ಹೋಗಿ ಬಳಿಕ ಫೋನ್ ನಂಬರ್ ಸ್ವೀಚ್ ಆಫ್ ಮಾಡಿಕೊಂಡು ರಾಜಕೀಯ ನಿವೃತ್ತಿ ಘೋಷಣೆ ಮಾಡಿ ನೆಮ್ಮದಿಯಾಗಿ ಇರಬೇಕಾಗುತ್ತೆ ಎಂಬ ಮಾತುಗಳನ್ನು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.ವಿದೇಶಿ ಗಣ್ಯರಿಗೆ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ
ಚಲುವರಾಯಸ್ವಾಮಿ ಅಂದು ಬಹಿರಂಗ ಸಮಾವೇಶದಲ್ಲಿ ಹೇಳಿದ್ದ ಮಾತನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ