ಚಾಮರಾಜನಗರದ 24 ಜನರ ಸಾವಿನ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದ್ದೇನೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿ ಹೇಳಿದರು.
ಮೈಸೂರಿನಿಂದ ಚಾಮರಾಜನಗರಕ್ಕೆ ಆಕ್ಸಿಜನ್ ಸರಬರಾಜು ಮಾಡಿಲ್ಲ ಎಂಬ ಆಪಾದನೆ ಸರಿ ಇಲ್ಲ, ಕಳೆದ ಮೂರು ದಿನದ ಹಿಂದೆಯೇ 40 ಆಕ್ಸಿಜನ್ ಸರಬರಾಜು ಮಾಡಲಾಗಿದೆ. ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ದಾಖಲಾತಿಯನ್ನು ತನಿಖಾಧಿಕಾರಿಗೆ ನೀಡಲಾಗುವುದು.
ತುಂಬಾ ಶ್ರಮಪಟ್ಟು ಕೆಲಸ ಮಾಡಿದ್ದೇವೆ. ಆಧಾರರಹಿತ ಆರೋಪ ಸಲ್ಲದು. ಈಗ ತನಿಖೆ ನಡೆಯುತ್ತಿದೆ. ಸತ್ಯ ಹೊರ ಬಂದಾಗ ತಪ್ಪು ಯಾರು ಮಾಡಿದ್ದಾರೆಂಬುದು ಗೊತ್ತಾಗುತ್ತದೆ ಎಂದರು
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ