ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ವರ್ಗಾವಣೆ ಗೊಂದಲ ಹುಟ್ಟಿಸಿದೆ. ಬುಧವಾರ ರಾತ್ರಿ ವರ್ಗಾವಣೆ ಆಗಿತ್ತು. ಗುರುವಾರ ಬೆಳಗ್ಗೆ ಮಾಧ್ಯಮ ಗಳಲ್ಲಿ ಸುದ್ದಿ ಆಗುವ ವೇಳೆಗೆ ವರ್ಗಾವಣೆ ಪ್ರಕ್ರಿಯೆ ರದ್ದಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಬೇಕಿದ್ದ ಡಾ.ಬಿ.ಸಿ. ಸತೀಶ್ ಪ್ರತಿಕ್ರಿಯೆ ನೀಡಿ, ನಿನ್ನೆ ರಾತ್ರಿ ವರ್ಗಾವಣೆ ಆಗಿತ್ತು. ಬೆಳಗ್ಗೆ ಬದಲಾಗಿದೆ. ನಾನು ಚಾಮರಾಜನಗರಕ್ಕೆ ಬರ್ತಾ ಇಲ್ಲ ಎಂದಿದ್ದಾರೆ.
ಸರ್ಕಾರ ಕೆಲ ತಿಂಗಳ ಹಿಂದೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾಗ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರನ್ನು ಬೆಂಗಳೂರಿನ ಸಕಾಲ ಮಿಷನ್ ನ ಹೆಚ್ಚುವರಿ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿತ್ತು.
ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರು ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ.ಬಿ.ಸಿ.ಸತೀಶ್ ಅವರನ್ನು ನಿಯುಕ್ತಿಗೊಳಸಲಾಗಿತ್ತು.
ಆಮ್ಲಜನಕ ದುರಂತದಲ್ಲಿ ಹೈಕೋರ್ಟ್ ನೇಮಕ ಮಾಡಿದ್ದ ಸಮಿತಿ ಸತ್ಯಶೋಧನೆ ನಡೆಸಿ ಜಿಲ್ಲಾಧಿಕಾರಿ ವೈಫಲ್ಯವನ್ನು ಎತ್ತಿಹಿಡಿದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮೇಲೆ ಶಿಸ್ತು ಕ್ರಮಕೈಗೊಳ್ಳಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಗುಂಡ್ಲುಪೇಟೆ ಬಿಜೆಪಿ ಶಾಸಕ ಮತ್ತು ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಸಹ ಗುರುವಾರ ಬೆಳಗ್ಗೆ ಡಿಸಿ ರವಿ ವರ್ಗಾವಣೆ ಆಗಿರುವುದಾಗಿ ತಿಳಿಸಿದ್ದರು.
ಆದರೆ ಪ್ರಭಾವಿಗಳ ಕೃಪೆಯಿಂದ ಡಿಸಿ ರವಿ ಚಾ.ನಗರದಲ್ಲೇ ಉಳಿದುಕೊಂಡಿರಬಹುದು ಎಂಬ ಅನುಮಾನ ಹುಟ್ಟಿದೆ.
ನನ್ನ ವರ್ಗಾವಣೆ ಆಗಿಲ್ಲ:
ನಾನು ಇಲ್ಲೇ ಇದ್ದೀನಲ್ಲಪ್ಪಾ, ನನ್ನ ವರ್ಗಾವಣೆ ಆಗಿಲ್ಲ ಎಂದು ಮಾಧ್ಯಮಗಳಿಗೆ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ.
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು