ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಅಶೋಕ್ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಅನುಮತಿ ಬೇಕು ಅಂತ ಈವರೆಗೂ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.
75 ವರ್ಷಗಳ ಬಳಿಕ ಮೊದಲ ಬಾರಿಗೆ ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ನಿರ್ಧಾರ ಮಾಡಲಾಯಿತು. ಗಣರಾಜೋತ್ಸವ ಕೂಡಾ ಮಾಡುತ್ತೇವೆ. ಮುಂದೆ ಕನ್ನಡ ರಾಜ್ಯೋತ್ಸವ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು.
ಗಣೇಶೋತ್ಸವದ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆ ಗಣೇಶೋತ್ಸವ ವಿಚಾರ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ