ಬೆಂಗಳೂರಿನ ಚಾಮರಾಜಪೇಟೆ ಆಟದ ಮೈದಾನದ ವಿವಾದ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.
ರಾಜ್ಯ ವಕ್ಫ್ ಬೋರ್ಡ್, ಬಿಬಿಎಂಪಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದೆ.ಇದನ್ನು ಓದಿ –ರಾಜ್ಯ ಸರ್ಕಾರ ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ .
ಬಿಬಿಎಂಪಿ ಪಾಲಿಕೆ ಆಯುಕ್ತರು ಮಾಡಿರುವ ಆದೇಶವನ್ನು ಪ್ರಶ್ನಿಸಿರುವ ವಕ್ಫ್ ಬೋರ್ಡ್, ಜಂಟಿ ಆಯುಕ್ತರಿಗೆ ಮಾಲೀಕತ್ವ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳುವ ಯಾವುದೇ ಅಧಿಕಾರ ಇಲ್ಲ. ಇದುವರೆಗೂ ಚಾಮರಾಜಪೇಟೆ ಮೈದಾನ ನಮ್ಮ ಸುಪರ್ಧಿಯಲ್ಲಿತ್ತು. ಹೀಗಾಗಿ ಜಂಟಿ ಆಯುಕ್ತರ ಆದೇಶವನ್ನ ರದ್ದು ಮಾಡುವಂತೆ ಕೋರಿ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಬಿಬಿಎಂಪಿ ಕಾಯ್ದೆ 2020ರ ಕಲಂ 149 ರಂತೆ ಪ್ರಾಪ್ತವಾದ ಅಧಿಕಾರದನ್ವಯ ರಾಜ್ಯ ವಕ್ಫ್ ಮಂಡಳಿ ಅರ್ಜಿ ಸಲ್ಲಿಸಿತ್ತು. ದಿನಾಂಕ 21-06-2022 ರಂದು ಸಲ್ಲಿಕೆಯಾದ ಅರ್ಜಿಯಲ್ಲಿ ಸರ್ವೇ ಸಂಖ್ಯೆ 40 ಅಳತೆ 2 ಎಕರೆ 5 ಗುಂಟೆ ಸ್ವತ್ತನ್ನು ಕರ್ನಾಟಕ ವಕ್ಫ್ ಮಂಡಳಿ ಹೆಸರಿಗೆ ಖಾತೆಯನ್ನು ಇಂಡೀಕರಣ ಮಾಡಲು ಸೂಚಿಸಿತ್ತು. ಈ ಅರ್ಜಿಯನ್ನು ವಜಾ ಮಾಡಲಾಗಿದೆ.
ಸದರಿ ಆಸ್ತಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಗೆ ಸೇರಿದೆ ಎಂದು ಪರಿಗಣಿಸಲಾಗಿದೆ. ಅರ್ಜಿದಾರರು (ವಕ್ಫ್ ಮಂಡಳಿ) ಈ ಆಸ್ತಿಯ ಬಗ್ಗೆ ಹಕ್ಕನ್ನು ಸ್ಥಾಪಿಸಬೇಕಾದ್ದಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯೊಂದಿಗೆ ವ್ಯವಹರಿಸುವ ಹಕ್ಕಿಗೆ ಈ ಆದೇಶ ಯಾವ ರೀತಿಯಿಂದಲೂ ಭಾಗವಾಗಿಲ್ಲ ಎಂದು ನಿರ್ಣಯಿಸಲಾಗಿದೆ. ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಎಂದು ನಮೂದಿಸಲು ಸೂಚಿಸಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ