April 18, 2025

Newsnap Kannada

The World at your finger tips!

chamundi betta fire

ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳ ಕೃತ್ಯ: 35 ಎಕರೆಯಷ್ಟು ಅರಣ್ಯ ಭಸ್ಮ

Spread the love

ಮೈಸೂರು: ಚಾಮುಂಡಿಬೆಟ್ಟದಲ್ಲಿ ಯಾರೋ ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಭಾರೀ ಪ್ರಮಾಣದಲ್ಲಿ ನಾಶವಾಗಿದೆ. ಒಟ್ಟು 35 ಎಕರೆಯಷ್ಟು ಅರಣ್ಯ ಭಸ್ಮವಾಗಿದೆ ಎಂದು ಮೈಸೂರು ಡಿಸಿಎಫ್ ಬಸವರಾಜು ತಿಳಿಸಿದ್ದಾರೆ.

ಶುಕ್ರವಾರ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಹಾಗೂ ಯಾವುದೇ ಪ್ರಾಣಿ ಅಥವಾ ಪಕ್ಷಿಗಳಿಗೆ ಹಾನಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಾಥಮಿಕ ತನಿಖೆಯ ಪ್ರಕಾರ, ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಟ್ಟದ ಒಣಹುಲ್ಲಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಟವರ್ ಲೊಕೆಷನ್ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ದನ ಮೇಯಿಸುವವರ ಮೇಲೂ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.ಇದನ್ನು ಓದಿ –ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಡಿಸಿಎಫ್ ಬಸವರಾಜು ಅವರು, ಈ ಹಿಂದೆಯೂ ಐದು ವರ್ಷಗಳ ಹಿಂದೆ ಇದೇ ರೀತಿಯ ಘಟನೆ ಸಂಭವಿಸಿ, ಅರಣ್ಯ ನಾಶವಾಗಿತ್ತು ಎಂದು ತಿಳಿಸಿದರು. ಈಗಾಗಲೇ ಅರಣ್ಯ ಇಲಾಖೆ ಹೆಚ್ಚಿನ ಜಾಗೃತೆಯಿಂದ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!