ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಐಸಿಯುಗೆ ಶಿಪ್ಟ್ – ಬೆಂಗಳೂರಿಗೆ ಕರೆತರುವ ಸಾಧ್ಯತೆ

Team Newsnap
1 Min Read

ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಮುರುಘಾ ಮಠದ ಶರಣರ ಆರೋಗ್ಯದಲ್ಲಿ ಏರುಪೇರು ಆಗಿದೆ. ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.

ಈ ನಡುವೆ ಜಯದೇವ ಆಸ್ಪತ್ರೆಗೆ ದಾಖಲು ಮಾಡಲು ಮುರುಘಾ ಶ್ರೀಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಚಿಂತನೆ ನಡೆದಿದೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸತತ 2 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಲಾಗಿದೆ. ಚೆಸ್ಟ್ ಸ್ಕ್ಯಾನ್, ಇಸಿಜಿ, ಎಕೊ, ಎಂ ಆರ್ ಐ ಸ್ಕ್ಯಾನ್ ಹೀಗೆ ಪರೀಕ್ಷೆ ನಡೆಸಲಾಗಿದೆ.

ಎದೆನೋವು ಹಾಗೂ ರಕ್ತದೊತ್ತಡದಿಂದ ಶ್ರೀಗಳು ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಮತ್ತೆ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ರವಾನಿಸಲಾಗಿದೆ. ಇದನ್ನು ಓದಿ – ಎದೆ ನೋವಿನಿಂದ ಕುಸಿದು ಬಿದ್ದ ಮುರುಘಾ ಶ್ರೀಗಳು ಜೈಲಿನಿಂದ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್

ಜಿಲ್ಲಾಸ್ಪತ್ರೆಯ ಆವರಣದಲ್ಲಿ ನೀರವ ಮೌನ ಆವರಿಸಿದೆ. ಎಸ್ ಜೆಎಂ ವಿದ್ಯಾಪೀಠದ ಸಿಬ್ಬಂದಿಗಳು ಆಸ್ಪತ್ರೆಗೆ ಬಂದಿದ್ದಾರೆ. ವೀರಶೈವ ಸಮಾಜದ ಮುಖಂಡರು ಹಾಗೂ ರಾಜ್ಯದ ನಾನಾಕಡೆಯ ಭಕ್ತರು ಆಗಮಿಸಿದ್ದು, ಮುರುಘಾ ಶ್ರೀ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕ್ಷಣಕ್ಷಣಕ್ಕೂ ಆಸ್ಪತ್ರೆ ಆವರಣದಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ.

Share This Article
Leave a comment