ಕೋಡಿಹಳ್ಳಿ ಚಂದ್ರಶೇಖರ್ ನನ್ನು ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ

Team Newsnap
1 Min Read
Chandrasekhar dismissed as State Farmers Union president

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ

ಇದನ್ನು ಓದಿ –ಜಮ್ಮುವಿನಲ್ಲಿ ಶಾಲೆಗೆ ನುಗ್ಗಿ ಗುಂಡಿಟ್ಟು ಹೈಸ್ಕೂಲ್‌ ಶಿಕ್ಷಕಿಯ ಹತ್ಯೆಗೈದ ಉಗ್ರರು

ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸುವಂತ ತೀರ್ಮಾನ ಕೈಗೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ನೂತನ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅವರು, ಇನ್ನುಮುಂದೆ ಕೋಡಿಹಳ್ಳಿ ಚಂದ್ರಶೇಖರ್ ಹೊರಗಿಟ್ಟು ಸಂಘಟನೆ ಬಲಪಡಿಸುತ್ತೇವೆ. ಎಲ್ಲಾ ರೈತ ಸಂಘಗಳು ಒಂದಾಗಿ ಮಾತುಕತೆಗೆ ಬಂದಲ್ಲಿ ನಾನು ಅಧ್ಯಕ್ಷ ಸ್ಥಾನ ತ್ಯಜಿಸುತ್ತೇನೆ ಎಂದು ಹೇಳಿದ್ದಾರೆ. ಇದೊಂದು ವಿಶೇಷ ಸಂದರ್ಭ. 1980 ರಲ್ಲಿ ರೈತ ಚಳವಳಿ ಆರಂಭವಾಯ್ತು. 1972 ರಲ್ಲೇ ಶಿವಮೊಗ್ಗದಲ್ಲಿ ರೈತ ಸಂಘ, ಮೂಡಿಗೆರೆಯಲ್ಲಿ ಕಬ್ಬು ಬೆಳೆಗಾರರ ಸಮಾವೇಶವನ್ನು ಪ್ರೊ. ನಂಜುಡಸ್ವಾಮಿ ಮಾಡಿದ್ದರು. ಶಿವಮೊಗ್ಗ ಜಿಲ್ಲೆಗೆ ರೈತ ಸಂಘದ 50 ವರ್ಷ ಚಳವಳಿ ಹಿನ್ನಲೆ ಇದೆ ಎಂದರು.

ಈ ಸಂದರ್ಭದಲ್ಲಿ ಡಾ. ಚಿಕ್ಕಸ್ವಾಮಿ, ಹಿಟ್ಟೂರು ರಾಜು, ಶಶಿಕಾಂತ್ ಪಡಸಲಗಿ, ಸಿದ್ಧವೀರಪ್ಪ, ಕುರುವ ಗಣೇಶ್, ಟಿ.ಎಂ. ಚಂದ್ರಪ್ಪ, ನಿಂಗಪ್ಪ, ಸಿದ್ಧವೀರಪ್ಪ, ಸುಭಾಷ್, ಬಸವನಗೌಡ ಪಾಟೀಲ್, ದುಗ್ಗಪ್ಪಗೌಡ, ಅಗ್ನಿ ಶಿವಪ್ಪ ಮೊದಲಾದವರಿದ್ದರು.

Share This Article
Leave a comment