July 6, 2022

Newsnap Kannada

The World at your finger tips!

WhatsApp Image 2022 05 29 at 10.06.01 AM

ತಮ್ಮ ಹೆಸರು ರಾಜ್ಯಸಭೆಗೆ ಪ್ರಸ್ತಾಪಿಸದ ಹಿನ್ನಲೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

Spread the love

ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಪಕ್ಷದ ಪ್ರಾಥಮಿಕ‌ ಸದಸ್ಯತ್ವಕ್ಕೆ ರಾಜೀನಾಮೆ ಕಳುಹಿಸಿದ್ದಾರೆ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಚಂದ್ರು ರಾಜೀನಾಮೆ ಸಲ್ಲಿಕೆ ಮಾಡಿ, ಈ ಕುರಿತಂತೆ ಪತ್ರ ರವಾನಿಸಿದ್ದಾರೆ.

ಕಾಂಗ್ರೆಸ್​ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದ ಪತ್ರದಲ್ಲಿ ಹೇಳಿದ್ದಾರೆ.

ಇದನ್ನು ಓದಿ : ಕರ್ನಾಟಕ ಫಿಲ್ಮ್ ಚೇಂಬರ್ ಗೆ ಭಾ.ಮಾ.ಹರೀಶ್ ಅಧ್ಯಕ್ಷರಾಗಿ ಆಯ್ಕೆ

ಎಂಎಲ್​​ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸದೇ ಇರೋದು ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದರೂ‌ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ತಮ್ಮ ರಾಜಕೀಯನಡೆ ಬಗ್ಗೆ ಏನೂ ಹೇಳಿಲ್ಲ.

error: Content is protected !!