ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೊಸ ನಿಯಮಗಳು
ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 23ರ ವರೆಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ 3 ದಿನಗಳ ಕಾಲ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಹೇರಲಾಗಿದೆ.
ಸಮ್ಮೇಳನಕ್ಕೆ ಆಗಮಿಸುವವರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲು ಈ ಮಾರ್ಗ ಬದಲಾವಣೆಗಳು ಜಾರಿಗೆ ತರಲಾಗಿದ್ದು, ಜಿಲ್ಲಾಧಿಕಾರಿ ಡಾ. ಕುಮಾರ್ ಅವರ ಆದೇಶದ ಮೇರೆಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ಸರ್ವಿಸ್ ರಸ್ತೆಗಳ ನಿಯಮಗಳು
ಚಿಕ್ಕಮಂಡ್ಯದಿಂದ ಹನಕೆರೆವರೆಗಿನ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ನಿಷೇಧಿಸಲಾಗಿದೆ. ಮದ್ದೂರು ಮತ್ತು ಶ್ರೀರಂಗಪಟ್ಟಣ ಕಡೆಯಿಂದ ಬರುವ ವಾಹನಗಳು ಎಕ್ಸ್‌ಪ್ರೆಸ್‌ವೇ ಮೂಲಕ ಸಂಚರಿಸಲು ಅವಕಾಶವಿದೆ.
ಉಚಿತ ಬಸ್ ಸೇವೆ
ಸಾರ್ವಜನಿಕರಿಗೆ ಅನುಕೂಲವಾಗಲು, KSRTC ಬಸ್ ನಿಲ್ದಾಣದಿಂದ ಸಮ್ಮೇಳನ ಸ್ಥಳದವರೆಗೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರಾಧಾನ್ಯತೆ ನೀಡುವ ಉದ್ದೇಶದಿಂದ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 20 ಹಾಗೂ 21ರಂದು ರಜೆ ಘೋಷಿಸಲಾಗಿದೆ. ಸಮ್ಮೇಳನದ ವೇಳೆ ಶಾಲಾ ಕಟ್ಟಡಗಳಲ್ಲಿ ವಸತಿ ಮತ್ತು ಮೂಲಸೌಲಭ್ಯಗಳನ್ನು ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಮ್ಮೇಳನದ ಉದ್ದೇಶ
ಸಾಹಿತ್ಯಾಭಿರುಚಿ ಮತ್ತು ನಾಡು-ನುಡಿಯ ಬಗ್ಗೆ ಅಭಿಯಾನ ಮೂಡಿಸುವ ಕಾರ್ಯಕ್ರಮವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯಾಗಿದೆ. ನಾಡಿನ ಸಾಹಿತ್ಯ, ಸಂಸ್ಕೃತಿ, ಪರಂಪರೆ, ಭಾಷೆ ಕುರಿತ ವಿವಿಧ ಗೋಷ್ಠಿಗಳು ನಡೆಯಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಸಾರ್ವಜನಿಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಪ್ರೋತ್ಸಾಹಿಸಲಾಗಿದೆ.ಇದನ್ನು ಓದಿ –ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ರಜೆ ಅವಧಿ ಪುನರ್‌ಪೂರಕ ದಿನಾಂಕದಲ್ಲಿ ಪಾಠ
ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ, ರಜೆ ಅವಧಿಯಲ್ಲಿ ಬರುವ ಪಾಠ, ಪ್ರವಚನಗಳನ್ನು ಮುಂದಿನ ಸವಲತ್ತುಗಳ ದಿನಗಳಲ್ಲಿ ಸರಿದೂಗಿಸಬೇಕೆಂದು ಸೂಚಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು