January 28, 2026

Newsnap Kannada

The World at your finger tips!

WhatsApp Image 2023 07 19 at 9.51.39 AM

ಗೃಹಲಕ್ಷ್ಮಿ ಯೋಜನೆ ಹಣ ಪಾವತಿ ವಿಧಾನದಲ್ಲಿ ಬದಲಾವಣೆ: ಇನ್ನು ಮುಂದೆ ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆ

Spread the love

ಬೆಂಗಳೂರು: ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆ ಹಣ ಪಾವತಿ ವಿಧಾನದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಇನ್ನು ಮುಂದೆ ತಾಲೂಕು ಪಂಚಾಯಿತಿಗಳ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ.

ಇದುವರೆಗೆ ಈ ಯೋಜನೆಯ ಹಣವನ್ನು ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಪಾವತಿಸಲಾಗುತ್ತಿತ್ತು. ಆದರೆ, ಇಲಾಖೆಗೆ ಹೆಚ್ಚಿನ ಹೊರೆ ತಪ್ಪಿಸಲು ಈಗ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ವರ್ಗಾಯಿಸಿ, ಅದನ್ನು ನೇರವಾಗಿ ಫಲಾನುಭವಿಗಳಿಗೆ ಪಾವತಿಸುವ ವ್ಯವಸ್ಥೆ ಮಾಡಲಾಗಿದೆ.

ಸದ್ಯ, ರಾಜ್ಯ ಸರ್ಕಾರ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಮಾಡಿಲ್ಲ, ಇದು ಮಹಿಳೆಯರಲ್ಲಿ ಆತಂಕ ಮೂಡಿಸಿದೆ. ಇದೇ ವೇಳೆ, ಯೋಜನೆಯ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಇಲಾಖೆ ಹಂತದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಆರೋಗ್ಯ ಸುಧಾರಿಸಿದ ನಂತರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿರುವುದರಿಂದ, ಅನೇಕ ಯೋಜನೆಗಳ ನೆರವು ವಿಳಂಬವಾಗುತ್ತಿದೆ. ಶಾಸಕರೇ ಈ ಕುರಿತು ಮಾತಾಡುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಪಾವತಿ ತಡವಾಗಿದೆ ಎಂಬುದು ಸ್ಪಷ್ಟವಾಗಿದೆ.ಇದನ್ನು ಓದಿ –ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ: ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಇನ್ನು, ಗೃಹಲಕ್ಷ್ಮಿ ಹಣ ಪಾವತಿ ವಿಧಾನದಲ್ಲಿ ಈ ಬದಲಾವಣೆ ಅಕ್ರಮಕ್ಕೆ ಅವಕಾಶ ಮಾಡಿಕೊಡಬಹುದಾ ಎಂಬ ಚರ್ಚೆಗಳು ಎದುರಾಗಿದ್ದು, ಇದರಿಂದ ಹಣ ಹಂಚಿಕೆಯ ಸುಗಮತೆ ಮತ್ತು ಪಾರದರ್ಶಕತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಪ್ರತಿ ತಿಂಗಳು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ರೈತರ ಖಾತೆಗೆ ನೇರವಾಗಿ ಜಮೆಯಾಗುತ್ತಿದ್ರೆ, ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ಏಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆಗಳು ಮಹಿಳೆಯರಿಂದ ಕೇಳಿ ಬರುತ್ತಿವೆ.

error: Content is protected !!