ಸಾಮರ್ಥ್ಯ ಇದ್ದವರು ಎಲ್ಲಿದ್ದರೂ ಯಶಸ್ಸು ಕಾಣುತ್ತಾರೆ. ದುರ್ಬಲ ಇರೋ ಕಡೆ ಬದಲಾವಣೆ ಆಗುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರವಿ ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದೇವೆ. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂತೋಷ್ ಅವರು ಯಾವ ಉದ್ದೇಶದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಗೆಲ್ಲುವ ಸಾಧ್ಯತೆ ಇರುವರಿಗೆ ಪಕ್ಷ ಬೆಂಬಲ ಕೊಡುತ್ತೆ. ದುರ್ಬಲ ಇರುವ ಕಡೆ ಬದಲಾವಣೆ ಮಾಡಲಾಗುತ್ತೆ. ಇದು ಹಿಂದಿನಿಂದ ಬಂದಿರುವ ಪದ್ದತಿ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.
ಗೆಲ್ಲುವ ಸಾಮರ್ಥ್ಯ ಇರುವವರಿಗೆ ನಮ್ಮ ಪಾರ್ಟಿ ಬೆಂಬಲ ಕೊಡುತ್ತಲೇ ಬಂದಿದೆ. ಸಾಮರ್ಥ್ಯ ಇದ್ದವರು ಎಲ್ಲಿದ್ದರೂ ಯಶಸ್ಸು ಕಾಣುತ್ತಾರೆ. ನಮ್ಮ ಪಕ್ಷ ದುರ್ಬಲರಿಗೆ ಮಣೆ ಹಾಕುವುದಿಲ್ಲ. ಕರ್ನಾಟಕಕ್ಕೆ ಕರ್ನಾಟಕದವರೇ ಮಾದರಿ. ಇಲ್ಲಿ ಗುಜರಾತ್, ಪಂಜಾಬ್ ಮಾದರಿ ಅನ್ನುವುದು ಇಲ್ಲ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

ಸಿ.ಟಿ.ರವಿ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು