ವೈದ್ಯಕೀಯ ಶಿಕ್ಷಣದಲ್ಲಿ ಬದಲಾವಣೆ ಅನಿವಾರ್ಯ- ಸಚಿವ ಸುಧಾಕರ್

Team Newsnap
1 Min Read
Picture credits: indiainfoline.com

ಬೆಂಗಳೂರು

ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ‌ ಸಾಕಷ್ಟು ಬದಲಾವಣೆ ಅನಿವಾರ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅಭಿಪ್ರಾಯ ಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್
ನಮ್ಮಲ್ಲಿ 60 ವೈದ್ಯಕೀಯ ಕಾಲೇಜುಗಳಿವೆ.‌ ವರ್ಷಕ್ಕೆ 10 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದಾರೆ. ಕಾಲೇಜಿನ‌ ಸಂಖ್ಯೆ ಹೆಚ್ಚಿಸಿದರೆ ಸಾಲದು ಗುಣಮಟ್ಟದ ಶಿಕ್ಷಣ ಕೊಡಿಸುವುದು ಅನಿವಾರ್ಯ ಎಂದರು.
ಮುಂದುವರೆದ ದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ನಡೆಸಿ, ಜಾಗತಿಕ ಮಟ್ಟದ ಗುಣಮಟ್ಟ ಶಿಕ್ಷಣವನ್ನು ಇಲ್ಲಿ‌ ಅಳವಡಿಸಿಕೊಳ್ಳುವ ಈ ನಿಟ್ಟಿನಲ್ಲಿ ನಮ್ಮ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಕಾಲೇಜುಗಳಲ್ಲಿ ಗುಣಮಟ್ಟದ ಲ್ಯಾಬ್

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ 108 ಲ್ಯಾಬ್‌ಗಳನ್ನು ತೆರೆದಿದ್ದೇವೆ. ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಸಹ ಗುಣಮಟ್ಟದ ಪ್ರಯೋಗಾಲಯಗಳನ್ನು ತೆರೆಯಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಗಮನಹರಿಸಲಿ ಎಂದರು.‌

ಇನ್ನು, ಅಂತರಾಷ್ಟ್ರೀಯ ಮೆಡಿಕಲ್‌ ಕಾಲೇಜಿನೊಂದಿಗೆ ಇಲ್ಲಿನ‌ ವೈದ್ಯಕೀಯ ವಿದ್ಯಾರ್ಥಿಗಳು ವಿನಿಮಯ ಕಾರ್ಯಕ್ರಮ‌ ನಡೆಸಲು ಯೋಜಿಸಿದ್ದೇವೆ. ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳು ಕ್ಲಿನಿಕಲ್‌ ಪ್ರಯೋಗಕ್ಕೆ ತೆರೆದುಕೊಳ್ಳಲು ಸಾಧ್ಯವಾಗಲಿದೆ. ಆಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕಲಿಕೆ ಹಾಗೂ ಹೊಸ ಆವಿಷ್ಕಾರಕ್ಕೆ ಅವಕಾಶ‌ ಸಿಗುತ್ತದೆ. ಈ ವರ್ಷದಿಂದಲೇ ಈ ಕಾರ್ಯವನ್ನು‌ ಪ್ರಾರಂಭಿಸಲು ಯೋಜಿಸಿದ್ದೆವು.‌ ಆದರೆ ಕೋವಿಡ್‌ ಕಾರಣದಿಂದ‌ ಸಾಧ್ಯವಾಗಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಲಿಕೆಗೆ ಉತ್ತೇಜನ‌ ನೀಡುತ್ತೇವೆ ಎಂದರು.

Share This Article
1 Comment