Main News

ವೈದ್ಯಕೀಯ ಶಿಕ್ಷಣದಲ್ಲಿ ಬದಲಾವಣೆ ಅನಿವಾರ್ಯ- ಸಚಿವ ಸುಧಾಕರ್

ಬೆಂಗಳೂರು

ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ‌ ಸಾಕಷ್ಟು ಬದಲಾವಣೆ ಅನಿವಾರ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅಭಿಪ್ರಾಯ ಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್
ನಮ್ಮಲ್ಲಿ 60 ವೈದ್ಯಕೀಯ ಕಾಲೇಜುಗಳಿವೆ.‌ ವರ್ಷಕ್ಕೆ 10 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದಾರೆ. ಕಾಲೇಜಿನ‌ ಸಂಖ್ಯೆ ಹೆಚ್ಚಿಸಿದರೆ ಸಾಲದು ಗುಣಮಟ್ಟದ ಶಿಕ್ಷಣ ಕೊಡಿಸುವುದು ಅನಿವಾರ್ಯ ಎಂದರು.
ಮುಂದುವರೆದ ದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ನಡೆಸಿ, ಜಾಗತಿಕ ಮಟ್ಟದ ಗುಣಮಟ್ಟ ಶಿಕ್ಷಣವನ್ನು ಇಲ್ಲಿ‌ ಅಳವಡಿಸಿಕೊಳ್ಳುವ ಈ ನಿಟ್ಟಿನಲ್ಲಿ ನಮ್ಮ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಕಾಲೇಜುಗಳಲ್ಲಿ ಗುಣಮಟ್ಟದ ಲ್ಯಾಬ್

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ 108 ಲ್ಯಾಬ್‌ಗಳನ್ನು ತೆರೆದಿದ್ದೇವೆ. ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಸಹ ಗುಣಮಟ್ಟದ ಪ್ರಯೋಗಾಲಯಗಳನ್ನು ತೆರೆಯಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಗಮನಹರಿಸಲಿ ಎಂದರು.‌

ಇನ್ನು, ಅಂತರಾಷ್ಟ್ರೀಯ ಮೆಡಿಕಲ್‌ ಕಾಲೇಜಿನೊಂದಿಗೆ ಇಲ್ಲಿನ‌ ವೈದ್ಯಕೀಯ ವಿದ್ಯಾರ್ಥಿಗಳು ವಿನಿಮಯ ಕಾರ್ಯಕ್ರಮ‌ ನಡೆಸಲು ಯೋಜಿಸಿದ್ದೇವೆ. ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳು ಕ್ಲಿನಿಕಲ್‌ ಪ್ರಯೋಗಕ್ಕೆ ತೆರೆದುಕೊಳ್ಳಲು ಸಾಧ್ಯವಾಗಲಿದೆ. ಆಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕಲಿಕೆ ಹಾಗೂ ಹೊಸ ಆವಿಷ್ಕಾರಕ್ಕೆ ಅವಕಾಶ‌ ಸಿಗುತ್ತದೆ. ಈ ವರ್ಷದಿಂದಲೇ ಈ ಕಾರ್ಯವನ್ನು‌ ಪ್ರಾರಂಭಿಸಲು ಯೋಜಿಸಿದ್ದೆವು.‌ ಆದರೆ ಕೋವಿಡ್‌ ಕಾರಣದಿಂದ‌ ಸಾಧ್ಯವಾಗಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಲಿಕೆಗೆ ಉತ್ತೇಜನ‌ ನೀಡುತ್ತೇವೆ ಎಂದರು.

Team Newsnap
Leave a Comment

View Comments

  • ಸಾರ್ವಜನಿಕ ಆರೋಗ್ಯ ವೈದ್ಯಕೀಯ ಶಿಕ್ಷಣ ಬೇರೆಯಾಗಬೇಕು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ , ರೋಗ ಬಾರದಹಾಗೆ ಜೀವನಶೈಲಿ ರೂಪಿಸಿಕೊಳ್ಳಲು ಸಮೂದಾಯವನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಕೆಲಸಗಳು ಜರುಗಬೇಕು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವೈದ್ಯರ ಸಮರ್ಪಕ ಬಳಕೆಯಾಗದಿದ್ದರೆ ಆ ಕ್ಷೇತ್ರದಲ್ಲಿ ವಿನಿಯೋಗ ಮಾಡುವ ಸಾರ್ವಜನಿಕ ಹಣಕಾಸು ವ್ಯರ್ಥ ವಾಗುವುದು

Share
Published by
Team Newsnap

Recent Posts

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024

ಅನ್ ಲೈನ್ ಮೋಸದ ಸುಳಿಗೆ ಸಿಲುಕಿದ್ದ ನಿರ್ದೇಶಕಿ ರೂಪ ಅಯ್ಯರ್ – ಸೈಬರ್ ಗೆ ದೂರು

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರು ಆನ್‌ಲೈನ್‌ನಲ್ಲಿ ಅತಿ ದೊಡ್ಡ ಮೋಸಗಾರರ ಜಾಲಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಬಚಾವ್… Read More

May 10, 2024