January 28, 2026

Newsnap Kannada

The World at your finger tips!

channagiri lockup death

ಚನ್ನಗಿರಿ ‘ಲಾಕಪ್ ಡೆತ್’ ಪ್ರಕರಣ : DYSP ಸೇರಿ 3 ಪೊಲೀಸ್ ಅಧಿಕಾರಿಗಳು ಅಮಾನತು

Spread the love

ದಾವಣಗೆರೆ : ಚನ್ನಗಿರಿ ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳನ್ನು ಲಾಕಪ್ ಡೆತ್, ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ , ಇನ್ ಸ್ಪೆಕ್ಟರ್ ಬಿ ನಿರಂಜನ್ , ಎಸ್ ಐ ಅಕ್ತರ್ ನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಆದಿಲ್ ಎಂಬ ವ್ಯಕ್ತಿಯನ್ನು ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ಠಾಣೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದರು.

ಮೃತರ ಸಂಬಂಧಿಕರು ಮತ್ತು ಇತರರು ಇದು ಲಾಕಪ್ ಡೆತ್ ಎಂದು ಆರೋಪಿಸಿ ,ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರು.ಯಡಿಯೂರಪ್ಪನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಅನೇಕ ಪೊಲೀಸರು ಘಟನೆಯಲ್ಲಿ ಗಾಯಗೊಂಡು ,ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಮಂದಿಯನ್ನು ಬಂಧಿಸಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

error: Content is protected !!