November 16, 2024

Newsnap Kannada

The World at your finger tips!

ಚನ್ನವೀರ ಕಣಿವಿ

ಸಮನ್ವಯ ಕವಿ, ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

Spread the love

ಕನ್ನಡ ಸಾಹಿತ್ಯ ಲೋಕದ ಸಮನ್ವಯ ಕವಿ, ನಾಡೋಜ ಚೆನ್ನವೀರ ಕಣವಿ ಇಂದು ಧಾರವಾಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಣವಿ ನಿಧನದ ನಂತರ ಧಾರವಾಡದ ಕಲ್ಯಾಣ ನಗರದ ಅವರ ಚೆಂಬೆಳಕು ನಿವಾಸದಲ್ಲಿ ಈಗ ಕತ್ತಲೆ ಆವರಿಸಿದೆ.

ಕನ್ನಡ ಸಾಹಿತ್ಯ ಲೋಕದ ನವೋದಯ ಮತ್ತು ನವ್ಯ ಸಾಹಿತ್ಯಗಳೆರಡರಲ್ಲಿಯೂ ಸಕ್ರಿಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು.

ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ ಪುತ್ರರಾಗಿ ಜನಿಸಿದರು. .

ಶಿರುಂಡ, ಗರಗಗಳಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950 ರಲ್ಲಿ ಬಿ.ಎ. ಪದವಿ (1950), ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ (1952) ಗಳಿಸಿದರು.

ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿ (1952) ಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅನಂತರ 1958ರಲ್ಲಿ ಅದರ ನಿರ್ದೇಶಕರಾದರು.

ಪ್ರಶಸ್ತಿಗಳು:

ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1981), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1985), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1989), ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್ (1996-98), ಪಂಪ ಪ್ರಶಸ್ತಿ (1999), ಇತ್ಯಾದಿ. 65ನೇ ಕನ್ನಡ ಸಾಹಿತ್ಯ ಸಮ್ಮೇಳನ (1996) ಹಾಸನದಲ್ಲಿ ಕಣವಿ ಸಮ್ಮೇಳನಾಧ್ಯಕ್ಷರಾಗಿದ್ದರು.

ಕಣವಿ ಕೃತಿಗಳು :

ಕಣವಿ ಅವರು ಕವಿತೆ, ವಿಮರ್ಶೆ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕನ್ನಡ ನಾಡಿನ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಕಣವಿ ಅವರ ಕಾವ್ಯಸಂಕಲನಗಳಲ್ಲಿ ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ದೀಪಧಾರಿ, ಮೆರವಣಿಗೆ, ಜೀವಧ್ವನಿ, ನಗರದಲ್ಲಿ ನೆರಳು, ಚಿರಂತನದಾಸ ಪ್ರಸಿದ್ಧವಾಗಿವೆ. ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಸಮತೋಲನ ಇತ್ಯಾದಿ ವಿಮರ್ಶಾ ಗ್ರಂಥಗಳು ಜನಪ್ರಿಯವಾಗಿವೆ.

Copyright © All rights reserved Newsnap | Newsever by AF themes.
error: Content is protected !!