ಅಕ್ರಮ ಆಸ್ತಿ ಸಂಬಂಧ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾರ ಆಪ್ತೆ ಶಶಿಕಲಾರಿಂದ ಇದೀಗ ಜೈಲು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.
4 ವರ್ಷ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ ವೇಳೆ ಶಶಿಕಲಾಗೆ ಜೈಲಿನಲ್ಲಿದ್ದ ಜೈಲು ಅಧಿಕಾರಿಗಳು ರಾಜಾತಿಥ್ಯ ನೀಡಲು ಲಂಚ ಪಡೆದ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿದ ಎಸಿಬಿ ಹೈಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಿದೆ.
ಶಶಿಕಲಾ ಜೈಲಿನಲ್ಲಿದ್ದಾಗ ಜೈಲು ಅಧಿಕಾರಿಗಳಾಗಿದ್ದ, ಕೃಷ್ಣ ಕುಮಾರ್, ಡಾ. ಅನಿತಾ ಆರ್, ಬಿ.ಎಸ್.ಸುರೇಶ್, ಗಜರಾಜ ಮಕನೂರು, ಇಳವರಸಿ, ಶಶಿಕಲಾಗೆ ರಾಜಾತಿಥ್ಯ ನೀಡಿದ್ದಾರೆ ಎಂದು ಚಾರ್ಜ್‍ಶೀಟ್‍ನಲ್ಲಿ ಆರೋಪಿಸಲಾಗಿದೆ.
ಪೊಲೀಸರು ಲಂಚ ಪಡೆದಿದ್ದಾರೆ ಎಂಬ ಬಗ್ಗೆ ದೂರು ದಾಖಲಿಸಿದ ಬಳಿಕ ಎಸಿಬಿ ಅಧಿಕಾರಿಗಳು ತನಿಖೆ ವಿಳಂಬ ಮಾಡುತ್ತಿದ್ದಾರೆ ಎಂದು ಕೆ.ಎಸ್.ಗೀತಾ ಪಿಐಎಲ್ ಸಲ್ಲಿಸಿದ್ದರು. ಇದೀಗ ಎಸಿಬಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಸರ್ಕಾರದ ಪೂರ್ವಾನುಮತಿ ಪಡೆದು, ಭ್ರಷ್ಟಾಚಾರ ತಡೆ ಕಾಯ್ದೆ ಸೆ.19ರಡಿ ಎಸಿಬಿ ಚಾರ್ಜ್‍ಶೀಟ್ ಹಾಕಿದೆ ಎಂದು ಹೈಕೋರ್ಟ್‍ಗೆ ಎಸಿಬಿ ಪರ ವಕೀಲ ಪಿ.ಎನ್.ಮನಮೋಹನ್ ಹೇಳಿಕೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ