ನಟ ನೀನಾಸಂ ಅಶ್ವತ್ಥ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಹಾಸನ ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ.
ಈ ಹಿಂದೆ ಕೂಡ ಅವಾಚ್ಯ ಶಬ್ದಗಳಿಂದ ನಿಂದನೆ, ಮಾನನಷ್ಟ, ಕೊಲೆ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳು ಈ ನಟನ ವಿರುದ್ಧ ದಾಖಲಾಗಿದ್ದವು.
ಪ್ರಕರಣದ ಹಿನ್ನಲೆ:
ಹಾಸನ ಮೂಲದ ರೋಹಿತ್ ಎಂಬುವರಿಂದ ನಟ ನೀನಾಸಂ ಅಶ್ವತ್ಥ ಹಸುಗಳನ್ನು ಖರೀದಿ ಮಾಡಿ, 1.5 ಲಕ್ಷ ರು ಮೊತ್ತದ ಚೆಕ್ ಅನ್ನು ನೀಡಿದ್ದರು,
ಈ ವೇಳೆ ಬ್ಯಾಂಕ್‌ಗೆ ಹಾಕಿದಾಗ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಹಾಸನದ ಜೆಎಮ್‌ಎಫ್‌ಸಿ ಕೋರ್ಟ್‌ನಲ್ಲಿ ರೋಹಿತ್ ಕೇಸ್ ದಾಖಲಿಸಿದ್ದರು.
ನಾಲ್ಕೂ ಬಾರಿಯೂ ಕೋರ್ಟ್‌ಗೆ ನಟ ನೀನಾಸಂ ಅಶ್ವತ್ಥ ಹಾಜಾರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಐದನೇ ಬಾರಿ ಅರೆಸ್ಟ್ ವಾರಂಟ್ ಹೊರಡಿಸಿದ್ದರು ಕೂಡ ಅವರು ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.
ಈ ನಡುವೆ ಹಾಸನ ಬಡಾವಣೆ ಠಾಣೆ ಪೊಲೀಸರು ಜುಲೈ 8ರಂದು ರಾತ್ರಿ ನಟನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಬಳಿಕ ನಟ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡು ಬಿಡುಗಡೆ ಮಾಡಿ ಬಾಕಿ ಹಣವನ್ನು ಶೀಘ್ರದಲ್ಲಿ ನೀಡುವುದಾಗಿ ತಿಳಿಸಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ