ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಪುತ್ರ ನರಸಿಂಹಮೂರ್ತಿಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.
ಚೆಕ್ ಬೌನ್ಸ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನರಸಿಂಹಮೂರ್ತಿಗೆ 6 ತಿಂಗಳು ಜೈಲು ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿದೆ.
ಪ್ರಕಾಶ್ ಕುಮಾರ್ ಎಂಬುವವರ ಪುತ್ರಿಗೆ ಸೀಟ್ ಕೊಡಿಸಲು ನರಸಿಂಹಮೂರ್ತಿ 45 ಲಕ್ಷ ರೂ. ಹಣವನ್ನು ಪಡೆದಿದ್ದರು. ಮೆಡಿಕಲ್ ಸೀಟ್ ಸಿಗದ ಕಾರಣ 45 ಲಕ್ಷ ರೂ.ಗೆ ಚೆಕ್ ನೀಡಿದ್ದರು. ಆದರೆ ಈ ಚೆಕ್ ಬೌನ್ಸ್ ಆಗಿತ್ತು. ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಕ್ಕೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು.ಬೆ -ಮೈ ಹೆದ್ದಾರಿಯ ಅಪಘಾತ ತಡೆಗೆ ಉನ್ನತ ಮಟ್ಟದ ತಜ್ಞರ ಸಮಿತಿ – ಸಚಿವ ಚೆಲುವರಾಯಸ್ವಾಮಿ
ಶಿಕ್ಷೆ ಪ್ರಮಾಣವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಗೆ ಕೋರ್ಟ್ 2 ತಿಂಗಳು ಕಾಲಾವಕಾಶ ನೀಡಿದೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ