ಚೆಕ್ ಬೌನ್ಸ್ ಪ್ರಕರಣ-ವೈಎಸ್‌ವಿ ದತ್ತಾ ಬಂಧನಕ್ಕೆ ವಾರೆಂಟ್

Team Newsnap
1 Min Read
Demand for non-partisan contest: Datta fans meeting on 9th at Kadur ಪಕ್ಷೇತರ ಸ್ಪರ್ಧೆಗೆ ಒತ್ತಾಯ: ಕಡೂರಿನಲ್ಲಿ ಏ 9 ರಂದು ದತ್ತ ಅಭಿಮಾನಿಗಳ ಸಭೆ

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈವಿಎಸ್ ದತ್ತಾ ಅವರನ್ನು ಮಾ. 27ಕ್ಕೆ ಕೋರ್ಟ್​ಗೆ ಹಾಜರುಪಡಿಸುವಂತೆ ವಿಶೇಷ ಕೋರ್ಟ್, ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ​ವೈ.
ಎಸ್.​ವಿ. ದತ್ತಾ ವಿರುದ್ಧ ಕೋರ್ಟ್, ಬಂಧನ ವಾರಂಟ್ ಜಾರಿಗೊಳಿಸಿದೆ.

ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್, ವೈಎಸ್​ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.ಬೆಂಗಳೂರಿನ ‘JDS ಅಭ್ಯರ್ಥಿ ಪ್ರಭಾಕರ್‌ ರೆಡ್ಡಿ’ ಮನೆ – ಕಚೇರಿ ಮೇಲೆ ಐಟಿ ದಾಳಿ

ಕೋರ್ಟ್​ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್​ 27ಕ್ಕೆ ದತ್ತಾ ಅವರನ್ನು ಕೋರ್ಟ್​ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.

ಉದ್ಯಮಿ ಸಿ.ಎಸ್.ಸೋಮೇಗೌಡಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ.

Share This Article
Leave a comment