ಮಂಡ್ಯ : ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಚೆಲುವರಾಯ ಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಜನರ ನೆಮ್ಮದಿ ಹಾಳು ಮಾಡುವ ಅವಶ್ಯಕತೆ ಇದೆಯಾ? ಎಂದು ಕಿಡಿ ಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಚೆಲುವರಾಯ ಸ್ವಾಮಿ ,ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡೋಕೆ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಂಡ್ಯ ಜನರ ಆಶಿರ್ವಾದವೇ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗುವುದಕ್ಕೆ ಕಾರಣ ಎಂಬುದನ್ನು ಎಚ್ ಡಿ ಕುಮಾರಸ್ವಾಮಿ ಮರೆತಿದ್ದಾರೆ ಎಂದು ಚೆಲುವರಾಯಸ್ವಾಮಿ ಹೆಳಿದರು.
ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು (ಸರ್ಕಾರವನ್ನು) ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು. ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು.
ಸಂವಿಧಾ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ ಎಂದು ಕುಮಾರಸ್ವಾಮಿ ಅವರನ್ನುದ್ದೇಶಿಸಿ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ , ಚುನಾವಣೆ ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಬಿಜೆಪಿಯನ್ನು ಟೀಕಿಸಿದಷ್ಟು ಬೇರೆ ಯಾರೂ ಟೀಕಿಸಿಲ್ಲ.ಧ್ವಜ ವಿವಾದ ಪ್ರಕರಣ : ನಿಭಾಯಿಸಿದ ರೀತಿ ತಪ್ಪು – ಸಂಸದೆ ಸುಮಲತಾ ಆಕ್ಷೇಪ
ಇದೀಗ ಮೈತ್ರಿ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ