ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಆದೇಶ

Team Newsnap
1 Min Read

ವೀರಶೈವ– ಲಿಂಗಾಯತ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ‘ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆದೇಶಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

‘ರಾಜ್ಯದಲ್ಲಿ ವೀರಶೈವ– ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ– ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ನಿನ್ನೆಯಷ್ಟೇ ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಲಿಂಗಾಯತ ಅಭಿವೃದ್ಧಿ ನಿಗಮದ ಜೊತೆಗೆ, ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಕಲ್ಪಿಸಿಕೊಂಡುವಂತೆ ಮನವಿ ಮಾಡಿದ್ದರು. ವೀರಶೈವ ಸಮುದಾಯದ ಮುಖಂಡರು, ಲಿಂಗಾಯುತ ಸಮುದಾಯದ ಮುಖಂಡರು, ಸ್ವಾಮೀಜಿಗಳು ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ನಂತರ, ಲಿಂಗಾಯತ, ವೀರಶೈವ ಸಮುಂದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ ಮಾಡಲಾಗಿತ್ತು.

ಇದಕ್ಕೆ ಪ್ರತಿ ಸ್ಪಂದಿಸಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶಿಸಿದ್ದಾರೆ. ಈ ಮೂಲಕ ಕೊನೆಗೂ ಐತಿಹಾಸಿಕ ನಿಲುವನ್ನು ತಾಳಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಆದೇಶಿಸಿದ್ದಾರೆ.

notice

ಮರಾಠ ಅಭಿವೃದ್ಧಿ ನಿಗಮವನ್ನು ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಸ್ಥಾಪನೆ ಮಾಡಿದ್ದರು. ಈ ಬಳಿಕ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು. ಇದೀಗ ಇದಕ್ಕೆ ಮಣಿದಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶಿಸಿದ್ದಾರೆ.

Share This Article
Leave a comment