ಮೈಸೂರಿಗೆ ನಾಳೆಯಿಂದ ಮೂರು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

Team Newsnap
1 Min Read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ. ದಿನಾಂಕ 27 ರಿಂದ 30ರ ತನಕ ಮೈಸೂರು ಜಿಲ್ಲೆಯಲ್ಲೇ ಸಿಎಂ ಸಿದ‍್ಧರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 28 ರಂದು ಮೈಸೂರಿನ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.

ಆಗಸ್ಟ್ 30 ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೊಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯು ಅದ್ದೂರಿಯಾಗಿ ಮೈಸೂರಿನಲ್ಲಿ ಪ್ರಾರಂಭವಾಗಲಿದೆ.ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ. ಸುಮಾರು 2 ಲಕ್ಷ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿಲ್ಲಾ ಪಂಚಾಯತ್​ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Share This Article
Leave a comment