ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿ ಆ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಶೇರ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಜರುಗಿದೆ.
8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಾಲಕಿನಿತ್ಯವೂ 4 ಕಿ.ಮೀ. ನಡೆದುಕೊಂಡು ಹೋಗುತ್ತಿದ್ದಳು. ಬಾಲಕಿ ಶಾಲೆಗೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ಯುವಕ ಬಾಲಕಿಯನ್ನು ಪಕ್ಕದಲ್ಲಿಯೇ ಇದ್ದ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ನಂತರ ವಿಡಿಯೋ ಹಾಗೂ ಪೋಟೋವನ್ನು ಬಾಲಕಿಗೆ ತೋರಿಸಿ ಕರೆದಾಗ ಬರಬೇಕು. ಇಲ್ಲವಾದ್ರೆ ವಿಡಿಯೋ ಸೋಶೀಯಲ್ ಮೀಡಿಯಾದಲ್ಲಿ ಲೀಕ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.
ನಂತರ ಅತ್ಯಾಚಾರದ ವಿಡಿಯೋವನ್ನು ಕಾಮುಕ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾರೆ. ನಂತರದಲ್ಲಿ ಬಾಲಕಿ ನಡೆದ ಘಟನೆಯನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಕಾಮುಕ ಹಾಗೂ ವಿಡಿಯೋ ಶೇರ್ ಮಾಡಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ