ಏಪ್ರಿಲ್ 8 ರಂದು ಪಾಂಡವಪುರ ತಾಲೂಕಿನ ಬಳ್ಳೇ ಅತ್ತಿಗುಪ್ಪೆ ಗ್ರಾಮದಲ್ಲಿ
ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೂವರು ಮಕ್ಕಳ ಧಾರುಣ ಸಾವು ಕಂಡ ಘಟನೆಗೆ ಸಂಬಂಧಿಸಿದಂತೆ ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು ಬಾಲಕರ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ನೀಡಿದರು.

ಶಾಸಕ ಪುಟ್ಟರಾಜು ಆದೇಶದಂತೆ ಶಾಸಕರ ಪರವಾಗಿ ಗ್ರಾಮಕ್ಕೆ ಭೇಟಿ ನೀಡಿದ ಜಿ ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ .ಅಶೋಕ್,ಸೋಮವಾರ ಬಳ್ಳೇಅತ್ತಿಗುಪ್ಪೆ ಗ್ರಾಮಕ್ಕೆ ಭೇಟಿ ನೀಡಿ ಮಹದೇವಪ್ಪ ಎಂಬುವರ ಇಬ್ಬರು ಮಕ್ಕಳಾದ ಚಂದನ್, ಕಾರ್ತಿಕ್ ಹಾಗೂ ಮಲ್ಲಿಕಾರ್ಜುನರ ಪುತ್ರ ರೀತೇಶ್ ರ ಕುಟುಂಬಗಳಿಗೆ ಸಾಂತ್ವನ ಹೇಳಿ ಪ್ರತಿ ಕುಟುಂಬಕ್ಕೆ ತಲಾ 20 ಸಾವಿರ ರು ಗಳ ಪರಿಹಾರ ವಿತರಿಸಿದರು.
ಈ ವೇಳೆ ಮಾತನಾಡಿದ ಜಿ ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಅಶೋಕ್, ಘಟನೆ ನಡೆದ ನಂತರ ಎರಡು ದಿನಗಳ ಕಾಲವು ಶಾಸಕ ಪುಟ್ಟರಾಜು ಅವರು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಸರ್ಕಾರದಿಂದ ದೊರೆಯಬಹುದಾದ ಪರಿಹಾರದ ಮೊತ್ತ ವಿಳಂಬ ಆಗುವ ಸಾಧ್ಯತೆ ಇದೆ. ಹೀಗಾಗಿ ವೈಯಕ್ತಿಕ ವಾಗಿ ಶಾಸಕರೇ 20 ಸಾವಿರ ನೀಡಿದ್ದಾರೆ ಎಂದರು.
ಸರ್ಕಾರದ ಪರಿಹಾರ ಕುರಿತಂತೆ ಶಾಸಕರು, ಜಿಲ್ಲಾಧಿಕಾರಿಗಳ ಮೂಲಕ ಶಿಫಾರಸ್ಸು ಮಾಡಿಸಿ ಪರಿಹಾರ ಕೊಡಿಸುವ ಪ್ರಯತ್ನವನ್ನು ಪ್ರಾಮಾಣಿಕ ವಾಗಿ ಮಾಡಲಿದ್ದಾರೆಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ