January 14, 2026

Newsnap Kannada

The World at your finger tips!

chitra dysp

ವಾಕಿಂಗ್ ನಂತರ ಮನೆಗೆ ಬಂದ ಚಿತ್ರದುರ್ಗ DCRB – DYSP ಹೃದಯಘಾತದಿಂದ ಸಾವು

Spread the love

ಮಂಗಳವಾರ ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದ ಚಿತ್ರದುರ್ಗದ ಡಿಇಆರ್ ಬಿ ಡಿವೈಎಸ್‍ಪಿ ಹೃದಯಾಘಾತದಿಂದ ಸಾವನ್ನಪ್ಪಿದರು.

ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ರಮೇಶ್(52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ವಾಕ್ ಮುಗಿಸಿ ಮನೆಗೆ ಬಂದ ರಮೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದರು. ಆಗ ತಕ್ಷಣ ಪೊಲೀಸರು ರಮೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವೇಶ್ವರ ಆಸ್ಪತ್ರೆಯಲ್ಲಿ ರಮೇಶ್ ಕೊನೆಯುಸಿರೆಳೆದಿದ್ದಾರೆ.

1998 ಬ್ಯಾಚ್ ನಲ್ಲಿ ರಮೇಶ್ ಅವರು ಪೊಲೀಸ್ ಸೇವೆಗೆ ಸೇರಿದ್ದರು. ಆದರೆ ಇಂದು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ

ಚಿತ್ರದುರ್ಗ ಎಸ್‍ಪಿ ಜಿ.ರಾಧಿಕಾ ಆಸ್ಪತ್ರೆಗೆ ಭೇಟಿ ನೀಡಿದ್ದು, ಇಲಾಖೆ ನಿಯಮ ಪ್ರಕಾರ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

error: Content is protected !!