ಬಸ್ ಕಂದಕ್ಕೆ ಉರುಳಿ7 ಮಂದಿ ಸಾವನ್ನಪ್ಪಿ , 45 ಮಂದಿ ಗಾಯ ಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಜರುಗಿದೆ
ಶನಿವಾರ ರಾತ್ರಿ 11.30ರ ಸುಮಾರಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‍ನಲ್ಲಿ ಬಸ್ಸೊಂದು ಕಂದಕ್ಕೆ ಬಿದ್ದಿದೆ
ಮದುವೆ ಸಮಾರಂಭಕ್ಕೆಂದು ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಮಂದಿಯನ್ನು ಕರೆದುಕೊಂಡು ಹೋಗುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಸ್ 50 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.
ಈ ಘಟನೆಯಲ್ಲಿ 7 ಮಂದಿ ಮೃತಪಟ್ಟರೆ 45 ಮಂದಿ ಗಾಯಗೊಂಡಿದ್ದಾರೆ.
2 ಲಕ್ಷ ರು ಪರಿಹಾರ – ಪ್ರಧಾನಿ:
ಈ ಬಸ್ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ 45 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಮೋದಿ ತಿಳಿಸಿದ್ದಾರೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ