December 27, 2024

Newsnap Kannada

The World at your finger tips!

new year 2022

ಬೆಂಗಳೂರಿನಲ್ಲಿ ಈ ಬಾರಿಯೂ ಕ್ರಿಸ್​ಮಸ್​,ಹೊಸ ವರ್ಷ ಸಂಭ್ರಮಕ್ಕೆ ಬ್ರೇಕ್ -ಗೌರವ್ ಗುಪ್ತಾ

Spread the love

ಒಮಿಕ್ರಾನ್​ ಆತಂಕ ಹಿನ್ನೆಲೆ ಸಿಲಿಕಾನ್​ ಬೆಂಗಳೂರಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್​ ಗುಪ್ತಾ ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು ರಾಜ್ಯದಲ್ಲಿ ಕೋವಿಡ್​ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ.

ಕೊರೊನಾದ ಈ ಪರಿಸ್ಥಿತಿಯಲ್ಲಿ ಆಚರಣೆಗೆ ಅವಕಾಶ ಕೊಡುವುದು ಬೇಡವೋ ಎಂಬುದು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ. ಬೂಸ್ಟರ್ ಡೋಸ್ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಬಿಬಿಎಂಪಿ ಯಾವುದೇ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ರಾಜ್ಯ ಸರ್ಕಾರದ ಪ್ರತಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಈ ಬಗ್ಗೆ ಘೋಷಣೆ ಮಾಡಬೇಕು ಎಂದು ಗೌರವ ಗುಪ್ತಾ ಹೇಳಿದರು.

Copyright © All rights reserved Newsnap | Newsever by AF themes.
error: Content is protected !!