December 29, 2024

Newsnap Kannada

The World at your finger tips!

dysp lakshmi

ಖಿನ್ನತೆ, ಮಕ್ಕಳಾಗಲಿಲ್ಲ ಎಂದು ನೊಂದು ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ

Spread the love

ಮಾನಸಿಕ ಖಿನ್ನತೆ, ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಸಂಸಾರದಲ್ಲಿ ಬಿರುಕು ಕಾಣಿಸಿಕೊಂಡ ಮೇಲೆ ಮನನೊಂದು ಸಿಐಡಿ ಡಿವೈಎಸ್ಪಿ ಲಕ್ಷ್ಮೀ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂದು ಜರುಗಿದೆ.

2014 ರ ಬ್ಯಾಚ್ ನಲ್ಲಿ ಕೆಪಿಎಸ್ ಸಿ ಪರೀಕ್ಷೆ ಬರೆದು ಡಿವೈಎಸ್ಪಿ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಲಕ್ಷ್ಮೀ (33 )8 ವರ್ಷಗಳ ಹಿಂದೆ ನವೀನ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಹೈದ್ರಾಬಾದ್ ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ನವೀನ್ ಗೆ ಮದುವೆಯಾಗಿ 8 ವರ್ಷಗಳಾದರೂ ಮಕ್ಕಳು ಆಗಲಿಲ್ಲ ಎಂಬ ಕಾರಣಕ್ಕಾಗಿ ಪತಿ, ಪತ್ನಿಯ ನಡುವೆ ಆಗಾಗ್ಗೆ ಸಾಕಷ್ಟು ಮನಸ್ತಾಪಗಳು, ಗಲಾಟೆಗಳೂ ಆಗಿತ್ತು.

ಈ ಕಾರಣಕ್ಕಾಗಿ ಹಿಂದೆ ಎರಡು ಬಾರಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಗೆ ಯತ್ನ ಮಾಡಿದ್ದರು ಎಂಬ ಮಾಹಿತಿ ಇದೆ.

ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಗೆಳೆಯ ಮನೋಹರ್ ಮನೆಯಲ್ಲಿ ಗೆಳೆಯರೆಲ್ಲಾ ಸೇರಿ ಪಾರ್ಟಿ ಮಾಡಿದ್ದಾರೆ. ಆ ಪಾರ್ಟಿ ಮುಗಿಸಿ ನಂತರ ಪ್ರತ್ಯೇಕ ರೂಂ ಒಂದರಲ್ಲಿ ನೇಣು ಬಿಗಿದುಕೊಂಡು ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಬಿಎಂಪಿ ಕ್ಲಾಸ್ 1 ಗುತ್ತಿಗೆದಾರ ಮನೋಹರ್ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಕಾರಣಕ್ಕಾಗಿ , ಪೋಲಿಸರು ಮನೋಹರ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!