PSI ನೇಮಕಾತಿ ಅಕ್ರಮ : ಶಾಸಕ ಪ್ರಿಯಾಂಕ್​ ಖರ್ಗೆಗೆ CID ನೋಟಿಸ್​ – ದಾಖಲೆ ತನ್ನಿ

Team Newsnap
0 Min Read

ಪಿಎಸ್ಐ (PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಡಿಯೋ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್​​​​ನಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಆರೋಪ ಸಂಬಂಧ ದಾಖಲೆಗಳೊಂದಿಗೆ ಇಂದು ಬೆಳಗ್ಗೆ 11.30ಕ್ಕೆ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

Share This Article
Leave a comment