ಸಿಗರೇಟ್ ಸೇದಿ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ನಡೆದಿದೆ.
ದೇವರ ಹಿಪ್ಪರಗಿಯ ಡಾಬಾವೊಂದರಲ್ಲಿ ಇಬ್ಬರು ಸಿಗರೇಟ್ ಸೇದುತ್ತಿದ್ದರು. ಇದೇ ವಿಚಾರದಲ್ಲಿ ನಾಲ್ವರ ನಡುವೆ ಗಲಾಟೆ ನಡೆದಿದೆ.
ಸಿಗರೇಟ್ ಸೇದಿ ಹೊಗೆ ಬಿಡುತ್ತಿರುವುದನ್ನು ಪ್ರಶ್ನಿಸಿದ ಯುವಕರಿಬ್ಬರ ಮೇಲೆ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದರು.
ಘಟನೆಯಲ್ಲಿ ದಿಲೀಪ್ ಚವ್ಹಾಣ್ (28), ಮಹಾಂತೇಶ್ ಚೌವ್ಹಾಣ್ (26) ಎಂಬವರು ಗಂಭೀರವಾಗಿ ಹಲ್ಲೆಗೊಳಗಾಗಿದ್ದಾರೆ.
ಸತೀಶ್ ಬೂದಿಹಾಳ ಮತ್ತು ಈಶ್ವರ ಸವದಿ ಎಂಬವರೇ ಹಲ್ಲೆ ನಡೆಸಿದ ಆರೋಪಿಗಳು. ಈ ಘಟನೆಯ ಕುರಿತು ಹಲ್ಲೆಗೊಳಗಾದವರು ಪೊಲೀಸರಿಗೆ ದೂರು ನೀಡಲು ತೆರಳಿದ ವೇಳೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರೊಬ್ಬರು ರಾಜಿ ಪಂಚಾಯಿತಿ ಮಾಡುವುದಾಗಿ ಪುಸಲಾಯಿಸಿ ಠಾಣೆಯಿಂದ ಇಬ್ಬರನ್ನೂ ಕರೆದೊಯ್ದು ನಂತರದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪವಿದೆ.
ಹಲ್ಲೆಗೊಳಗಾದವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲಾಸ್ಪತ್ರೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಕರಣದ ಕುರಿತು ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
More Stories
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !