ರಷ್ಯಾದಲ್ಲಿ ಅಂತರ್ಯುದ್ಧ: ಅಧ್ಯಕ್ಷ ಪುಟೀನ್ ವಿರುದ್ದ ದಂಗೆ

Team Newsnap
3 Min Read
Civil War in Russia: Revolt Against President Putin ರಷ್ಯಾದಲ್ಲಿ ಅಂತರ್ಯುದ್ಧ: ಅಧ್ಯಕ್ಷ ಪುಟೀನ್ ವಿರುದ್ದ ದಂಗೆ
  • ವಿಮಾನ ಹೆಲಿಕ್ಯಾಪ್ಟರ್ ಹೊಡೆದುರುಳಿಸಿ ಖಾಸಗಿ ಪಡೆ
  • ರೊಸ್ತೊವಾ ವಶಕ್ಕೆ ಪಡೆದ ಖಾಸಗಿ ಸೇನೆ
  • ಮಾಸ್ಕೋ ಗೆ ನುಗ್ಗುವ ಎಚ್ಚರಿಕೆ

ಮಾಸ್ಕೋ : ರಷ್ಯಾದಲ್ಲಿ ಅಂತರ್ಯುದ್ದ ಆರಂಭವಾಗಿದೆ. ಯಕ್ರೇನ್ ಕಳೆದ 500 ದಿನಗಳ ನಿರಂತರ ಯುದ್ಧ ಸಾರಿರುವ ಅಧ್ಯಕ್ಷ ಪುಟೀನ್ ನಿರ್ಧಾರ ಖಂಡಿಸಿ ಸೇನಾ ದಂಗೆ ಆರಂಭವಾಗಿದೆ.

ಈ ನಡುವೆ ರಷ್ಯಾ ದೇಶದ ಸೇನೆಯ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡಿದ ನಂತರ ಪ್ರಬಲ ಸೇನಾ ಪಡೆಯ ವ್ಯಾಗ್ನರ್‌ನ ಮುಖ್ಯಸ್ಥನನ್ನು ಬಂಧಿಸಲು ರಷ್ಯಾ ಸರ್ಕಾರ ಆದೇಶಿಸಿದೆ.

ಖಾಸಗಿ ಸೈನ್ಯದಿಂದ ರಷ್ಯಾದ ಒಂದು ಯುದ್ಧ ವಿಮಾನ ಹಾಗೂ ಮೂರು ಹೆಲಿಕ್ಯಾಪ್ಟರ್ ಗಳನ್ನು ಹೊಡೆದು ಉರುಳಿಸಲಾಗಿದೆ. ಅಲ್ಲದೆ ಈಗಾಗಲೇ ರೊಸ್ತೊವಾ ನಗರವನ್ನು ದಂಗೆಕೋರರು ವಶಪಡಿಸಿಕೊಂಡಿದ್ದಾರೆ. ಮಾಸ್ಕೊ ನಗರಕ್ಕೂ ನಾವು ನುಗ್ಗುತ್ತೇವೆ ಎಂಬ ವ್ಯಾಗ್ನರ್ ಪಡೆಯ ಮುಖ್ಯಸ್ಥನ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮಾಸ್ಕೊದಲ್ಲಿ ಸೇನೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಉಕ್ರೇನ್ ವಿರುದ್ಧ ದೀರ್ಘ ಕಾಲದಿಂದ ಯುದ್ಧ ನಡೆಸುತ್ತಿರುವ ರಷ್ಯಾಕ್ಕೆ ಈಗ ದೇಶದ ಒಳಗೇ ದಂಗೆಯ ಬಿಸಿ ತಟ್ಟಿದೆ

ರಷ್ಯಾದ ವ್ಯಾಗ್ನರ್ ಗುಂಪಿನ (ಅರೆಸೇನಾ ಮಾದರಿಯಲ್ಲಿ ಸೇನೆಯ ಪರವಾಗಿ ಕಾರ್ಯನಿರ್ವಹಿಸುವ ಖಾಸಗಿ ಮಿಲಿಟರಿ ಕಂಪನಿ) ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಕ್ಷಣಾ ಸಚಿವಾಲಯ ಹಾಗೂ ರಕ್ಷಣಾ ಸಚಿವರ ವಿರುದ್ಧವೇ ಬಂಡಾಯವೆದ್ದಿದ್ದಾರೆ

ರಷ್ಯಾದ ಪ್ರಬಲ ಖಾಸಗಿ ಸೇನೆ ವ್ಯಾಗ್ನರ್ ಗುಂಪಿನ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಪುಟಿನ್‌ ನಾಯಕತ್ವವನ್ನು ಉರುಳಿಸುವುದಾಗಿ ಪ್ರತಿಜ್ಞೆ ಮಾಡಿದ ನಂತರ ರಾಜಧಾನಿ ಮಾಸ್ಕೋ ಸೇರಿದಂತೆ ರಷ್ಯಾದ ಹಲವಾರು ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಭಯೋತ್ಪಾದನಾ ವಿರೋಧಿ ಕಾರ್ಯಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಘೋಷಿಸಲಾಗಿದೆ.

ದಕ್ಷಿಣ ರಷ್ಯಾದಲ್ಲಿರುವ ರೋಸ್ಟೊವ್ ಮತ್ತು ಲಿಪೆಟ್ಸ್ಕ್ ಕೂಡ ಭದ್ರತೆಯನ್ನು ಬಲಪಡಿಸಿದ್ದಾರೆ. ರೋಸ್ಟೊವ್‌ನಲ್ಲಿ, ಅಧಿಕಾರಿಗಳು ತಮ್ಮ ಮನೆಗಳನ್ನು ತೊರೆಯದಂತೆ ಎಲ್ಲಾ ನಿವಾಸಿಗಳಿಗೆ ಸೂಚಿಸಿದ್ದಾರೆ.

“ಮಾಸ್ಕೋದಲ್ಲಿ ಒಳಬರುವ ಮಾಹಿತಿಗೆ ಸಂಬಂಧಿಸಿದಂತೆ, ಭದ್ರತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಭಯೋತ್ಪಾದನಾ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ರಷ್ಯಾದ ರಕ್ಷಣಾ ನಾಯಕತ್ವದ ಸಾಮರ್ಥ್ಯವನ್ನು ಬಹಿರಂಗವಾಗಿ ಪ್ರಶ್ನಿಸಿರುವ ಮತ್ತು ಟೀಕಿಸಿರುವ ಖಾಸಗಿ ಸೇನೆ ವ್ಯಾಗ್ನರ್ ನ ಮುಖ್ಯಸ್ಥ ಪ್ರಿಗೊಜಿನ್, ರಷ್ಯಾದ ರಕ್ಷಣಾ ಸಚಿವರ ಆದೇಶದ ಮೇರೆಗೆ ತಮ್ಮ ತಮ್ಮ ಸೈನಿಕರ ಬೆಂಗಾವಲು ವಾಹನದ ಮೇಲೆ ಯುದ್ಧ ವಿಮಾನಗಳಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ಸೇನಾ ನಾಯಕತ್ವವನ್ನು ಪತನಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ತಮ್ಮ ಪಡೆಗಳು ಎಲ್ಲವನ್ನೂ ನಾಶಗೊಳಿಸಲಿವೆ ಎಂದು ಅವರು ಘೋಷಿಸಿದ್ದಾರೆ.

ವ್ಯಾಗ್ನರ್‌ ಮುಖ್ಯಸ್ಥನ ಬಂಧನಕ್ಕೆ ಆದೇಶ ಇದರ ಬೆನ್ನಲ್ಲೇ, ರಷ್ಯಾದ ರಕ್ಷಣಾ ಸಚಿವಾಲಯವು ಪ್ರಿಗೋಜಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.

ರಕ್ಷಣಾ ಸಚಿವಾಲಯವು ವ್ಯಾಗ್ನರ್ ಗುಂಪಿನ ಮುಖ್ಯಸ್ಥನ ಮೇಲೆ ಸಶಸ್ತ್ರ ದಂಗೆಯ ಆರೋಪ ಹೊರಿಸಿದೆ. ಇಷ್ಟೇ ಅಲ್ಲದೆ, ಪ್ರಿಗೋಜಿನ್ ಆದೇಶಗಳನ್ನು ಪಾಲಿಸದಂತೆ ವ್ಯಾಗ್ನರ್ ಗುಂಪಿನ ಪಡೆಗಳಿಗೆ ಮನವಿ ಮಾಡಿದೆ.

ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?:

ವ್ಯಾಗ್ನರ್ ಗುಂಪು ಈ ಹಿಂದಿನಿಂದಲೂ ರಷ್ಯಾ ಪರವಾಗಿ ಉಕ್ರೇನ್ ಸೇರಿದಂತೆ ಹಲವು ದೇಶಗಳಲ್ಲಿ ಮುಂಚೂಣಿಯಲ್ಲಿ ಹೋರಾಡುತ್ತಿದೆ. ಆದರೆ ಹಲವು ವಿಚಾರಗಳಲ್ಲಿ ವ್ಯಾಗ್ನರ್ ಗುಂಪು ರಷ್ಯಾ ಸೇನೆ ವಿರುದ್ಧ ಅಸಮಾಧಾನ ಗೊಂಡಿತ್ತು. ಈ ಹಿಂದೆಯೂ ಸಹ, ತಮ್ಮ ಸೈನಿಕರಿಗೆ ಸಾಕಷ್ಟು ಶಸ್ತ್ರಾಸ್ತ್ರಗಳು ಮತ್ತು ಸಂಪನ್ಮೂಲಗಳನ್ನು ಒದಗಿಸಿಲ್ಲ ಎಂದು ರಷ್ಯಾದ ರಕ್ಷಣಾ ಸಚಿವಾಲಯವನ್ನು ಪ್ರಿಗೊಜಿನ್ ಹಲವಾರು ಬಾರಿ ಆರೋಪಿಸಿದ್ದರು.ಡಿಸೆಂಬರ್ ನಲ್ಲಿ ಬಿಬಿಎಂಪಿಗೆ ಚುನಾವಣೆ : ಸರ್ಕಾರದ ಚಿಂತನೆ – ಸಾರಿಗೆ ಸಚಿವ ರೆಡ್ಡಿ

ರಷ್ಯಾದ ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರು ರಷ್ಯಾದ ಮಿಲಿಟರಿ ಜನರಲ್‌ಗಳೊಂದಿಗೆ ವ್ಯಾಗ್ನರ್ ಗುಂಪನ್ನು ನಾಶಮಾಡಲು ಬಯಸುತ್ತಾರೆ ಎಂದು ಪ್ರಿಗೊಜಿನ್ ಹೇಳಿದ್ದಾರೆ.

Share This Article
Leave a comment