ಚಾಮರಾಜನಗರ : 10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Team Newsnap
1 Min Read

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಪೆಲಿಸಾ ಎಂಬ ವಿದ್ಯಾರ್ಥಿನಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಇತ್ತೀಚೆಗೆ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಚಿಕ್ಕ ಚಿಕ್ಕ ವಯಸ್ಸಿನ್ಲಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದುರದೃಷ್ಟವಶಾತ್ ಅಷ್ಟರಾಗಲೇ ಜೀವ ನಿಂತು ಹೋಗಿತ್ತು.

girl

ಪೆಲಿಸಾ ಮೂಲತಃ ಬೆಂಗಳೂರಿನವಳಾಗಿದ್ದು, ಇನ್ನು ಈ ಮೊದಲು ತಂದೆ ಅಸುನೀಗಿದ್ದರಿಂದ ಈಕೆಯನ್ನು ಕ್ರೈಸ್ತ ಮಿಷನರಿ ಸಹಾಯದಿಂದ ವಿದ್ಯಾಭ್ಯಾಸಕ್ಕಾಗಿ ಗುಂಡ್ಲುಪೇಟೆ ನಿರ್ಮಲಾ ಕಾನ್ವೆಂಟ್‌ಗೆ ದಾಖಲಿಸಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾಲಕಿಗೆ ತಾಯಿ, ಸಹೋದರ, ಸಹೋದರಿ ಇದ್ದಾರೆ. ಇವರು ಬೆಂಗಳೂರಿನಲ್ಲಿದ್ದಾರೆ.IFS ಅಧಿಕಾರಿಗಳ ವರ್ಗಾವಣೆ

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮೃತಳ ತಾಯಿ ದೂರು ಕೊಟ್ಟಿದ್ದು, ಪ್ರಕರಣ ದಾಖಲಾಗಬೇಕಿದೆ.

Share This Article
Leave a comment