Karnataka

ಶಾಸ್ತ್ರೀಯ ಕನ್ನಡ ಅತ್ಯುನ್ನತ ‌ಅಧ್ಯಯನ ಕೇಂದ್ರ; ಜುಲೈ 27ರಿಂದ ಪ್ರಚಾರೋಪನ್ಯಾಸ ಮಾಲೆ

ಮೈಸೂರು: ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಜುಲೈ 27ರಿಂದ ಅಕ್ಟೋಬರ್ 26ರ ವರೆಗೆ ರಾಜ್ಯದ ವಿವಿಧೆಡೆ ಪ್ರಚಾರೋಪನ್ಯಾಸ ಮಾಲೆಯನ್ನು ಏರ್ಪಡಿಸಿದೆ.

27ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಚಾರೋಪನ್ಯಾಸ ಮಾಲೆಯ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

ನಂತರ ಡಾ.ಅಂಬಳಿಕೆ ಹಿರಿಯಣ್ಣ ‘ಜಾನಪದ ಸಂಗ್ರಹ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಕುರಿತು ಉಪನ್ಯಾಸ ನೀಡುವರು.

ಆಗಸ್ಟ್ 2ರಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜನಗರದ ವಿಶ್ವವಿದ್ಯಾಲಯದಲ್ಲಿ ಡಾ‌.ಎಂ.ಜಿ.ಮಂಜುನಾಥ್ ಅವರು ‘ಕನ್ನಡ ಶಾಸನಗಳ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಕುರಿತು ಮಾತನಾಡುವರು.

ಆಗಸ್ಟ್‌ 8ರಂದು ಬೆಳಿಗ್ಗೆ 11 ಗಂಟೆಗೆ ಹಾಸನದ ಹಾಸನ ವಿಶ್ವವಿದ್ಯಾಲಯದಲ್ಲಿ ಡಾ.ಎಫ್.ಟಿ.ಹಳ್ಳಿಕೇರಿ ಅವರು ‘ಕನ್ನಡ ಹಸ್ತಪ್ರತಿ ಅಧ್ಯಯನ’ ಕುರಿತು ಉಪನ್ಯಾಸ ನೀಡುವರು.

ಆಗಸ್ಟ್ 18ರಂದು ಬೆಳಿಗ್ಗೆ 11 ಗಂಟೆಗೆ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ಡಾ.ತಾಳ್ತಜೆ ವಸಂತಕುಮಾರ್ ಅವರು ‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ’ ಕುರಿತು.

ಸೆಪ್ಟೆಂಬರ್ 4ರಂದು ಬೆಳಿಗ್ಗೆ 11 ಗಂಟೆಗೆ ‌ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರೊ.ಎನ್.ಎಸ್. ರಂಗರಾಜು ಅವರು ‘ಕರ್ನಾಟಕದಲ್ಲಿ ಪುರಾತತ್ವ ಅಧ್ಯಯನ’ ಕುರಿತು ಮಾತನಾಡುವರು.

ಸೆಪ್ಟೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಡಾ.ಎಸ್‌.ಕಾರ್ತಿಕ್ ಅವರು ‘ ಕನ್ನಡ ನಿಘಂಟು ರಚನೆ’ ಕುರಿತು, ಸೆಪ್ಟೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾಲಯದ ಕೊಣಾಜೆಯಲ್ಲಿ ಡಾ.ಎ.ವಿ.ನಾವಡ ‘ ಕನ್ನಡ ಸಾಹಿತ್ಯ ಚರಿತ್ರೆ’ ಕುರಿತು ಉಪನ್ಯಾಸ ನೀಡುವರು.

ಅಕ್ಟೋಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಾ.ಎ.ಮುರಿಗೆಪ್ಪ ‘ಕನ್ನಡ ಭಾಷಾ ವಿಜ್ಞಾನ ಅಧ್ಯಯನ’ ಕುರಿತು ಮಾತನಾಡುವರು.

ಅಕ್ಟೋಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಕೊಡಗು ವಿಶ್ವವಿದ್ಯಾಲಯದಲ್ಲಿ ಡಾ.ಆರ್ವಿಯಸ್ ಸುಂದರಂ ‘ಕವಿರಾಜಮಾರ್ಗ: ಹೊಸ ಓದು’ ಕುರಿತು ಮಾತನಾಡುವರು.

ಅಕ್ಟೋಬರ್ 26ರಂದು ಬೆಳಿಗ್ಗೆ 11 ಗಂಟೆಗೆ ಉಪನ್ಯಾಸ ಮಾಲೆಯ ಕೊನೆಯ ಕಂತು ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಡಾ.ಪಾದೇಕಲ್ಲು ವಿಷ್ಣುಭಟ್ ‘ಕನ್ನಡ ಲಕ್ಷಣ ಗ್ರಂಥಗಳ ಅಧ್ಯಯನ’ ಕುರಿತು ಮಾತನಾಡುವರು.ಅಂದಿನ ಪರಿಸ್ಥಿತಿ ನೋಡಿಕೊಂಡು ಬಿಜೆಪಿ – ಜೆಡಿಎಸ್ ಮೈತ್ರಿ ನಿರ್ಧಾರ – ದೇವೇಗೌಡ

ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಮನು ಬಳಿಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024