Main News

ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಕ್ಕೆ 1 ಸಾವಿರ ಕೋಟಿ ಮೀಸಲು – ಸಿಎಂ ಮೊದಲ ಘೋಷಣೆ ‌

ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು 1 ಸಾವಿರ ಕೋಟಿ ರು ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಜಾರಿಗೆ ತರುವುದಾಗಿ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಘೋಷಣೆ ಮಾಡಿದರು.‌

ಮುಖ್ಯಮಂತ್ರಿಯಾದ ನಂತರ ಮೊದಲ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಘೋಷಣೆಗಳು:

  • ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆ.
  • ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ ಮಾಸಾಶನ 1,000 ದಿಂದ 1,200 ರೂ.ಗೆ ಹೆಚ್ಚಳ. ಈ ಯೋಜನೆಗೆ 863 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ.
  • ಅಂಗವಿಕಲರ ವೇತನ 600 ರೂ. ಯಿಂದ 800 ರೂ.ಗೆ ಹೆಚ್ಚಳ
  • ವಿಧವಾ ವೇತನ 800 ರೂ.ಗೆ ಹೆಚ್ಚಳ. 17.25 ಲಕ್ಷ ಫಲಾನುಭವಿಗಳಿಗೆ ಲಾಭ ಸಿಗಲಿದೆ.‌

ಸಿಎಂ ಪ್ರಮುಖ ನಿರ್ಧಾರಗಳು‌:

  • ರಾಜ್ಯದ ಎಲ್ಲಾ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದೇನೆ. ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
  • ಮ್ಯಾಕ್ರೋ ಮ್ಯಾನೇಜ್​​ಮೆಂಟ್​​ ಅಲ್ಲ, ಮೈಕ್ರೋ ಮ್ಯಾನೇಜ್​​ಮೆಂಟ್​​ ಮಾಡಬೇಕು.
  • ಇಲಾಖೆ ನಡುವೆಯೇ ಯಾವುದೇ ತಡವಿಲ್ಲದೇ ಕೆಲಸ ಆಗಬೇಕು.
  • ಎಲ್ಲರೂ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು. ಏನು ಮಾಡಿದರೂ ನಡೆಯುತ್ತೆ ಎಂಬ ಮನೋಭಾವ ಇನ್ನೂ ನಡೆಯೋದಿಲ್ಲ ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ,
  • ಆರ್ಥಿಕ ವೆಚ್ಚ ಕಡಿಮೆ ಮಾಡಲು ಎಲ್ಲಾ ಇಲಾಖೆಗಳ ವೆಚ್ಚವನ್ನು ಕನಿಷ್ಠ 5 ರಷ್ಟಾದರೂ ಕಡಿಮೆ ಮಾಡಬೇಕು.
  • ಫೈಲ್​ ಕ್ಲಿಯರೆನ್ಸ್​ ತಡವಾಗುವು ದನ್ನು ತಡೆಯಲು ವಿಶೇಷ ಯೋಜನೆ ಜಾರಿ ಮಾಡುತ್ತೇವೆ. 15 ದಿನಗಳಲ್ಲಿ ಹೊಸ ಯೋಜನೆ ಆರಂಭವಾಗಲಿದೆ.
  • ಹೊಸ ದಿಸ್ಸೂಚಿಯಿಂದ ಆಡಳಿತದಲ್ಲಿ ದಕ್ಷತೆ ತರುವ, ಅಭಿವೃದ್ಧಿ ಕಾಮಗಾರಿಗೆ ವೇಗ ನೀಡುವ ಕಾರ್ಯ ಮಾಡುತ್ತೇವೆ.
  • ಆಡಳಿತ ದೃಷ್ಠಿಯಿಂದಲೂ ಆರ್ಥಿಕ ಇಲಾಖೆಯೊಂದಿಗೆ ಮಾತುಕತೆ ನಡೆಸುತ್ತೇನೆ.
  • ಕೊರೊನಾ ಮತ್ತು ನೆರೆ ಸವಾಲು ಎದುರಿದೆ. ಆರೋಗ್ಯ ಸಚಿವರೊಂದಿಗೆ ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಸುತ್ತೇವೆ.
Newsnap Team
Leave a Comment
Share
Published by
Newsnap Team

Recent Posts

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024