ವಿದ್ಯಾಗಮ ಕಾರ್ಯಕ್ರಮದ ಮೂಲಕ ಅನೇಕ ಶಿಕ್ಷಕರು ಕೊರೋನಾ ಸೋಂಕಿಗೆ ಒಳಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಸಿಎಂ ‘ಕೋವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಬಿಸದಿರುವಂತೆ ನಿರ್ಧರಿಸಲಾಗಿದೆ.
ಹಾಗೆಯೇ ವಿದ್ಯಾಗಮ ಕಾರ್ಯಮವನ್ನೂ ಸಹ ನಿಲ್ಲಿಸಲು ಆದೇಶ ನೀಡಲಾಗಿದೆ. ಮಾಧ್ಯಮಗಳ ಮೂಲಕ ಅನೇಕ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗುವುದನ್ನು ನಾನು ಗಮನಿಸಿರುವೆ. ಹಾಗಾಗಿ 12-10-2020 ರಿಂದ 30-10-2020 ವರೆಗೆ, ಮೂರು ವಾರಗಳ ಕಾಲ, ರಜೆಯನ್ನು ಘೋಷಣೆ ಮಾಡಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.’ ಎಂದು ಹೇಳಿದ್ದಾರೆ.
ಮುಂಚಿತವಾಗಿಯೇ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ದಸರಾ ಹಬ್ಬದ ಶುಭಾಶಯಗಳನ್ನೂ ಕೋರಿದ್ದಾರೆ.
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ