ಚಿತ್ರ ಮಂದಿರ ಹೌಸ್ ಫುಲ್ ಪ್ರದರ್ಶನಕ್ಕೆ ತಡೆ ನೀಡದ ಸಿಎಂ: ಬಿಬಿಎಂಪಿ ಪ್ರಸ್ತಾವನೆ ತಿರಸ್ಕಾರ

Team Newsnap
1 Min Read

ಸಿನಿಮಾ ಥಿಯೇಟರ್ ಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ಕಲ್ಪಿಸಬೇಕೆಂಬ ಬಿಬಿಎಂಪಿ ಪ್ರಸ್ತಾವನೆಯನ್ನು ಸಿಎಂ ಯಡಿಯೂರಪ್ಪ ತಿರಸ್ಕರಿಸಿದರು. ‌

ಈ ಮೂಲಕ ಚಿತ್ರರಂಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಗ್ ರಿಲೀಫ್ ನೀಡಿದರು.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ ಈ ಹಿನ್ನೆಲೆಯಲ್ಲಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಅದರಲ್ಲೂ ಸಿನಿಮಾ ಥಿಯೇಟರ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಕಡಿವಾಣ ಹಾಕಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ಥಿಯೇಟರ್ ಗಳಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಿಬಿಎಂಪಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಬಿಬಿಎಂಪಿ ಪ್ರಸ್ತಾವನೆಯ ಬೆನ್ನಲ್ಲೇ ಸ್ಯಾಂಡಲ್ ವುಡ್ ದಿಗ್ಗಜರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು.

ಶೀಘ್ರದಲ್ಲಿಯೇ ಹೈ ಬಜೆಟ್ ಸಿನಿಮಾಗಳು ತೆರೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ನಟರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಸಿಎಂ ಯಡಿಯೂರಪ್ಪ ಅವರಿಗೂ ಮನವಿ ಮಾಡಿಕೊಂಡಿದ್ದರು.

ಇದೀಗ ಸಿಎಂ ಯಡಿಯೂರಪ್ಪ ಪ್ರಸ್ತುತ ಜಾರಿಯಲ್ಲಿರುವ ನಿಯಮವನ್ನೇ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ಥಿಯೇಟರ್ ಮಾಲೀಕರು, ಪ್ರೇಕ್ಷಕರು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆಯೂ ಸೂಚನೆಯನ್ನು ನೀಡಿದ್ದಾರೆ.

Share This Article
Leave a comment