Main News

ಸ್ವಾತಂತ್ರ್ಯ ಅಮೃತಮಹೋತ್ಸವದ ಸವಿನೆನಪಿಗಾಗಿ ಸಿಎಂ ಬೊಮ್ಮಾಯಿ ಹೊಸ ಯೋಜನೆಗಳ ಘೋಷಣೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ.

  • ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
  • ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲದ ಸಹಾಯಧನ ಯೋಜನೆ.
  • ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ. ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುತ್ತೇವೆ. ಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸುತ್ತೇವೆ. 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ.
  • ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.
Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024