Main News

ತಮ್ಮ ಪರ ಸಹಿ ಸಂಗ್ರಹ ಬೇಡ: ಜನರ ಸಂಕಷ್ಟಕ್ಕೆ ಸ್ಪಂದಿಸಿ – ಬಿಎಸ್ ವೈ

ಯಾರೂ ಕೂಡ ನನ್ನ ಪರ ಸಹಿ ಸಂಗ್ರಹ ಮಾಡುವುದು ಬೇಡ. ಸಂಕಷ್ಟದಲ್ಲಿರುವ ಜನರಿಗೆ ನೇರವಾಗಿ ಸ್ಪಂದಿಸುವ ಕೆಲಸ ಮಾಡಿ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿರೋಧಿಸಿ, ಬಿಎಸ್​ವೈ ಪರ ಅವರ ಅಪ್ತ ರೇಣುಕಾಚಾರ್ಯ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು.

ಈ ಸಂಬಂಧ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ಯಡಿಯೂರಪ್ಪ.. ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024