ಕೆಲವು ವಿನಾಯಿತಿ ನೀಡಿ ಲಾಕ್ ಡೌನ್ ಅನ್ನು ಜೂನ್ 7 ನಂತರವೂ ವಿಸ್ತರಣೆ ಮಾಡುವುದು ಖಚಿತ. ಆದರೆ ವಿಸ್ತರಣೆ ರೂಪರೇಷೆಯನ್ನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ ನಂತರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ರಾಜ್ಯದ ಗ್ರಾಮೀಣ
ಭಾಗದಲ್ಲಿ ಕೊರೊನಾ ಸಂಫೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಲಾಕ್ಡೌನ್ ಮುಂದುವರಿಯುತ್ತದೆ. ಆದರೆ ಎಷ್ಟು ದಿನ ಲಾಕ್ಡೌನ್ ಮುಂದುವರಿಸಬೇಕು? ಎಂಬ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಯಾವುದೇ ತೀರ್ಮಾನವಾದರೂ ಇಂದಿನ ಸಭೆಯ ಬಳಿಕ ಮಾಹಿತಿ ನೀಡುತ್ತೇನೆ ಎಂದರು.
ಗುರುವಾರದಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಈ ಬಗ್ಗೆ ಚರ್ಚೆ ಬಳಿಕವೇ ಅಂತಿಮ ನಿರ್ಧಾರ ಮಾಡಲಾಗುವುದು. ಮುಂದಿನ ಎರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುತ್ತೇವೆ. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ಅನ್ನು ಮತ್ತಷ್ಟು ಕಠಿಣ ಮಾಡಿ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ