ಶೇ 1ರಷ್ಟು ಕಮೀಷನ್ ಪಡೆದ ಆರೋಪ ಪಂಜಾಬ್ ಆರೋಗ್ಯ ಸಚಿವರನ್ನೇ ವಜಾಗೊಳಿಸಿದ ಸಿ ಎಂ

Team Newsnap
1 Min Read
CM dismisses Punjab health minister as accused ಶೇ

ಪಂಜಾಬ್ ಸಿಎಂ ಭಗವಂತ್ ಮಾನ್ ಮಂಗಳವಾರ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಂಪುಟದಿಂದ ವಜಾಗೊಳಿಸಿದ್ದಾರೆ

ಇದನ್ನು ಓದಿ –ಪತ್ನಿ ಬೆನ್ನು ನೋವು ಎಂದಿದ್ದಕ್ಕೆ ಮೊಪೆಡ್‌ ಖರೀದಿಸಿದ ಭಿಕ್ಷುಕ!

ಸಚಿವ ಸಿಂಗ್ಲಾ ಟೆಂಡರ್‌ಗಳಲ್ಲಿ ಶೇ 1 ರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಅವರನ್ನು ಪದಚ್ಯುತಿಗೊಳಿಸಿದ ಕೂಡಲೇ ಪಂಜಾಬ್ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ

ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಚಿವರ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಂಪುಟದ ಸಚಿವರೊಬ್ಬರನ್ನು ವಜಾಗೊಳಿಸಿದ್ದರು.

ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಭಗವಂತ್‌ ಮಾನ್ ವೀಡಿಯೋದಲ್ಲಿ ಸಂದೇಶ ರವಾನಿಸಿದ್ದಾರೆ. ʼಸಿಂಗ್ಲಾ ಅವರು ಭ್ರಷ್ಟಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಜನರು ಸಾಕಷ್ಟು ಭರವಸೆಯೊಂದಿಗೆ ಎಎಪಿಗೆ ಮತ ಹಾಕಿದ್ದಾರೆ. ನಾವು ಅದನ್ನು ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆʼ ಎಂದು ತಿಳಿಸಿದ್ದಾರೆ.

Share This Article
Leave a comment