ಪೆಡ್ಲರ್ ಗಳಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರನ್ನು ಬಂಧಿಸಿ ಪ್ರಕರಣ ಜರುಗಿದೆ.
ಶಿವಕುಮಾರ್ ಹಾಗೂ ಸಂತೋಷ್ ಎಂಬ ಪೇದೆಗಳು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾರೆ.
ಇವರಿಬ್ಬರು ಗಾಂಜಾ ಪೆಡ್ಲರ್‌ಗಳ ಮೂಲಕ ಗಾಂಜಾ ತರಿಸಿಕೊಂಡು ಮಾರಾಟಕ್ಕೆ ಮಾಡುತ್ತಿದ್ದರು.
ಅಚ್ಚರಿದಾಯಕ ವಿಷಯವೆಂದರೆ, ಇವರು ಸಿಎಂ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದರು.
ಇವರಿಬ್ಬರೂ ಕೊರಮಂಗಲ ಪೊಲೀಸ್ ಠಾಣಾ ಸಿಬ್ಬಂದಿಯಾಗಿದ್ದಾರೆ. ಪೋಲಿಸರಿಗೆ ಬೇಕಾಗಿದ್ದ
ಪೆಡ್ಲರ್‌ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದರು.
ಪೆಡ್ಲರ್‌ಗಳಿಂದ ಗಾಂಜಾ ಪಡೆದು ಹಣ ಕೊಡದೇ ಹಲ್ಲೆಗೆ ಮುಂದಾಗಿದ್ದರು. ಮುಖ್ಯಮಂತ್ರಿಗಳ ಮನೆ ಇರುವ ಆರ್.ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದ್ದಾರೆ. ಖಾಕಿ ತೊಟ್ಟವರೇ ಗಾಂಜಾ ಮಾರಾಟಕ್ಕಿಳಿದಿರುವುದನ್ನು ತಿಳಿದು ಪೊಲೀಸರು ಅಚ್ಚರಿಗೊಂಡಿದ್ದಾರೆ.
ಆಇಬ್ಬರು ಪೊಲೀಸರು ಹಾಗೂ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿರುವ ಆರ್.ಟಿ.ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ