ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ.
ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರು ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಸಿಎಂ ಇಬ್ರಾಹಿಂ ವರಿಷ್ಠರ ವಿರುದ್ಧ ನೇರವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.ನೇರವಾಗಿ ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ನೀಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು