ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಇಬ್ರಾಹಿಂ ಅಧಿಕೃತವಾಗಿ ಇಂದು ಘೋಷಿಸಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದರು.
ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಆದ ರಾಜಕೀಯ ಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯಲ್ಲೂ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇಂದು ಅಥವಾ ನಾಳೆ ದೇವೇಗೌಡರು ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. ಗೊತ್ತಿಲ್ಲದ ದಾರಿಯಲ್ಲಿ ಹೋಗುವುದಕ್ಕಿಂತ ಗೊತ್ತಿರುವ ದಾರಿಯಲ್ಲಿ ಹೋಗುವುದು ಒಳಿತು ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡೆಸಿದ ಸಂಧಾನ ವಿಫಲವಾಗಿವೆ, ಕಾಂಗ್ರೆಸ್ ತೊರೆಯುವುದು ಅಧಿಕೃತವಾಗಿದೆ. ಈ ಹಿನ್ನೆಲೆಯಲ್ಲಿ ತವರು ಪಕ್ಷವಾದ ಜೆಡಿಎಸ್ ವಾಪಸಾಗುವುದು ಬಹುತೇಕ ಖಚಿತವಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು