ಆ. 7 ರಂದು ಆರು ಜಿಲ್ಲೆಗಳ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ

Team Newsnap
1 Min Read

ಬೆಂಗಳೂರು – ಸಿಎಂ ಸಿದ್ದರಾಮಯ್ಯ ಆಗಸ್ಟ್ 7 ರಂದು (ಸೋಮವಾರ) ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಮಂಡ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವ ಚಲುವರಾಯಸ್ವಾಮಿ

ಸಭೆಯು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ರ ವರೆಗೆ ಹಾಗೂ ಸಂಜೆ 4.00 ಗಂಟೆಯಿಂದ 7 ಗಂಟೆಯ ವರೆಗೆ ನಡೆಯಲಿದೆ.

Share This Article
Leave a comment