March 26, 2025

Newsnap Kannada

The World at your finger tips!

sidda

ನಮ್ಮ ಮೆಟ್ರೋ ಟಿಕೆಟ್ ದರ ಕಡಿತಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Spread the love

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೇಟ್ರೋ ಪ್ರಯಾಣ ದರವನ್ನು ಪರಿಷ್ಕರಿಸಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದಾಗಿ ಕೆಲವು ವಿಭಾಗಗಳಲ್ಲಿ ಟಿಕೆಟ್ ದರಗಳು ದ್ವಿಗುಣಗೊಂಡಿದ್ದು, ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ (ಎಂಡಿ) ಮೆಟ್ರೋ ಟಿಕೆಟ್ ದರವನ್ನು ತಕ್ಷಣ ಪರಿಷ್ಕರಿಸಲು ಹಾಗೂ ಕಡಿಮೆ ಮಾಡಲು ಸೂಚನೆ ನೀಡಿದ್ದಾರೆ.

ಟ್ವೀಟ್ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ, “ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಜಾರಿಗೊಳಿಸಿದ ಪ್ರಯಾಣ ದರ ಪರಿಷ್ಕರಣೆ ಅಸಂಗತವಾಗಿದೆ. ಇದರಿಂದ ಕೆಲವು ವಿಭಾಗಗಳಲ್ಲಿ ದರಗಳು ಹೆಚ್ಚಳಗೊಂಡಿದ್ದು, ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗಿದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಿ, ಪ್ರಯಾಣಿಕರ ಹಿತಾಸಕ್ತಿಯನ್ನು ಕಾಪಾಡುವಂತೆ ನಾನು ಬಿಎಂಆರ್‌ಸಿಎಲ್ ಎಂಡಿಗೆ ಸೂಚಿಸಿದ್ದೇನೆ” ಎಂದು ಹೇಳಿದ್ದಾರೆ.ಇದನ್ನು ಓದಿ –ಮೈಸೂರಿನ ಉದಯಗಿರಿ ಗಲಭೆ: 1,000 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ FIR ದಾಖಲು

ರಾಜಧಾನಿ ಬೆಂಗಳೂರು ದಿನದಿನಗೂ ಬೆಲೆ ಏರಿಕೆಯಿಂದ ತೀವ್ರ ಹಾನಿಗೊಳಗಾಗುತ್ತಿರುವಾಗ, ಮೆಟ್ರೋ ದರಗಳ ಹೆಚ್ಚಳದಿಂದ ಜನತೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!