ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಗಂಗಾಧರ ಹೂಗಾರ ಮತ್ತು ನ್ಯೂಸ್1 ಕ್ಯಾಮರಾಮೆನ್ ಸೆಲ್ವರಾಜು (ಚಾಮರಾಜನಗರ) ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.

ಸಂಕಷ್ಟದಲ್ಲಿರುವ ಗಂಗಾಧರ ಹೂಗಾರ ಕುಟುಂಬಕ್ಕೆ ನೆರವು ನೀಡುವಂತೆ ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸೆಲ್ವರಾಜು ಅವರ ಕುಟುಂಬಕ್ಕೆ ನೆರವು ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಸಂಘವು, ರಾಜ್ಯ ಸಂಘಕ್ಕೆ ಪತ್ರ ಬರೆದಿದ್ದರು.

ಈ ಬಗ್ಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಪರಿಹಾರ ಮಂಜೂರು ಮಾಡಿಸಿದ್ದಾರೆ.
ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ