ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಭಾರತಿ ಪತ್ರಿಕೆಯ ಪತ್ರಕರ್ತ ದಯಾನಂದ ಕುಡುಪು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.
ಪತ್ರಕರ್ತ ದಯಾನಂದ ಕುಡುಪು ಮೃತಪಟ್ಟಿದ್ದು, ಅವರ ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಅಂದಿನ ಸಿಎಂ ಯಡಿಯೂರಪ್ಪ ಅವರು ಪರಿಹಾರ ಮಂಜೂರು ಮಾಡಿದ್ದರು.
ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ್ದ ಯಡಿಯೂರಪ್ಪ, ಈಗ ಪರಿಹಾರ ಬಿಡುಗಡೆ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಕೃತಜ್ಞತೆಗಳು ಸಲ್ಲಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು